ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಾರಾತ್ಮಕ ವಹಿವಾಟು: ಸೂಚ್ಯಂಕ 297 ಅಂಶ ಇಳಿಕೆ

Last Updated 27 ಡಿಸೆಂಬರ್ 2019, 4:39 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಮೂರನೇ ದಿನವೂ ನಕಾರಾತ್ಮಕ ವಹಿವಾಟು ನಡೆಯಿತು.

ಸರ್ಕಾರಿ ಸಾಲಪತ್ರಗಳ ಡಿಸೆಂಬರ್‌ ತಿಂಗಳ ವಾಯಿದಾ ವಹಿವಾಟು ಗುರುವಾರ ಮುಕ್ತಾಯವಾಗಿದೆ. ಇದು ಷೇರುಪೇಟೆಯಲ್ಲಿ ಮಾರಾಟದ ಒತ್ತಡ ಸೃಷ್ಟಿಸಿ ಸೂಚ್ಯಂಕಗಳನ್ನು ಇಳಿಕೆ ಕಾಣುವಂತೆ ಮಾಡಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 297 ಅಂಶಗಳ ಇಳಿಕೆ ಕಂಡು 41,164 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 88 ಅಂಶ ಇಳಿಕೆಯಾಗಿ 12,126 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಗರಿಷ್ಠ ನಷ್ಟ: ಭಾರ್ತಿ ಏರ್‌ಟೆಲ್‌ ಷೇರು ದಿನದ ವಹಿವಾಟಿನಲ್ಲಿ ಶೇ 2.23ರಷ್ಟು ಗರಿಷ್ಠ ನಷ್ಟ ಕಂಡಿತು. ರಿಲಯನ್ಸ್ ಇಂಡಸ್ಟ್ರೀಸ್‌, ಎಲ್‌ಆ್ಯಂಡ್‌ಟಿ, ಸನ್‌ ಫಾರ್ಮಾ, ಎಚ್‌ಡಿಎಫ್‌ಸಿ ಬ್ಯಾಂಕ್‌, ಮಾರುತಿ, ಟೈಟನ್‌ ಮತ್ತು ಕೋಟಕ್‌ ಬ್ಯಾಂಕ್‌ ಷೇರುಗಳ ಮೌಲ್ಯದಲ್ಲಿ ಇಳಿಕೆಯಾಗಿದೆ.

ವರ್ಷಾಂತ್ಯದ ರಜೆಯ ಕಾರಣಕ್ಕಾಗಿ ಹೂಡಿಕೆದಾರರು ಉತ್ಸಾಹದಿಂದ ವಹಿವಾಟಿನಲ್ಲಿ ಭಾಗವಹಿಸುತ್ತಿಲ್ಲ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಬಂಡವಾಳ ಹೊರಹರಿವು: ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಮಾರಾಟಕ್ಕೆ ಗಮನ ನೀಡಿದ್ದಾರೆ. ಗುರುವಾರದ ವಹಿವಾಟಿನಲ್ಲಿ ₹ 504 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 4 ಪೈಸೆ ಇಳಿಕೆಯಾಗಿ ಮೂರು ವಾರಗಳ ಕನಿಷ್ಠ ಮಟ್ಟಕ್ಕೆ ಇಳಿಕೆ ಕಂಡಿತು. ಒಂದು ಡಾಲರ್‌ಗೆ ₹ 71.31ರಂತೆ ವಿನಿಮಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT