ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆ | ಸತತ 6ನೇ ವಾರವೂ ಗಳಿಕೆ

Last Updated 25 ಜುಲೈ 2020, 14:56 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಆರನೇ ವಾರವೂ ಸಕಾರಾತ್ಮಕವಾಗಿ ವಹಿವಾಟು ಅಂತ್ಯವಾಗಿದೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 1,109 ಅಂಶ ಹೆಚ್ಚಾಗಿ 38,128 ಅಂಶಗಳಿಗೆ ತಲುಪಿದೆ.

ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರ ಸಂಪತ್ತು ₹ 2.43 ಲಕ್ಷ ಕೋಟಿ ಹೆಚ್ಚಾಗಿದೆ. ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ ₹ 147.28 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 292 ಅಂಶ ಹೆಚ್ಚಾಗಿ 11,194 ಅಂಶಗಳಿಗೆ ಏರಿಕೆಯಾಗಿದೆ.

ಆರ್‌ಐಎಲ್‌ ಮೌಲ್ಯ ಹೆಚ್ಚಳ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ (ಆರ್‌ಐಎಲ್‌) ಮಾರುಕಟ್ಟೆ ಮೌಲ್ಯ ₹ 14 ಲಕ್ಷ ಕೋಟಿ ದಾಟಿದೆ.

ಶುಕ್ರವಾರ ಕಂಪನಿಯ ಮಾರುಕಟ್ಟೆ ಮೌಲ್ಯ ₹ 54,262 ಕೋಟಿ ಹೆಚ್ಚಾಗಿದ್ದು, ₹ 14.14 ಲಕ್ಷ ಕೋಟಿಗೆ ತಲುಪಿದೆ. ಈ ವರ್ಷದಲ್ಲಿ ಇಲ್ಲಿಯವರೆಗೆ ಕಂಪನಿಯ ಷೇರು ಮೌಲ್ಯ ಶೇ 41.74ರಷ್ಟು ಹೆಚ್ಚಾಗಿದೆ.

ದೇಶದ ಅತ್ಯಂತ ಮೌಲ್ಯಯುತ ಕಂಪನಿಗಳ ಸಾಲಿನಲ್ಲಿ ಆರ್‌ಐಎಲ್‌ ಮೊದಲ ಸ್ಥಾನದಲ್ಲಿದೆ. ₹ 8.09 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯ ಹೊಂದಿರುವ ಟಿಸಿಎಸ್‌ ಎರಡನೇ ಸ್ಥಾನದಲ್ಲಿದೆ.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ, ವಾರದ ವಹಿವಾಟಿನಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 19 ಪೈಸೆ ಹೆಚ್ಚಾಗಿದ್ದು, ₹ 74.83ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT