ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರದ ವಹಿವಾಟು: ಚೇತರಿಸಿಕೊಳ್ಳದ ಷೇರುಪೇಟೆ

Last Updated 16 ಮೇ 2020, 11:36 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳ ವಾರದ ವಹಿವಾಟು ನಕಾರಾತ್ಮಕವಾಗಿ ಅಂತ್ಯಗೊಂಡಿದೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 545 ಅಂಶ ಇಳಿಕೆಯಾಗಿ 31,097 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 114 ಅಂಶ ಇಳಿಕೆಯಾಗಿ 9,136 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯಗೊಂಡಿದೆ.

ದೇಶದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚಾಗುತ್ತಿರುವುದು, ವಿತ್ತೀಯ ಉತ್ತೇಜನ ಪ್ಯಾಕೇಜ್‌ಗಳು ಆರ್ಥಿಕ ಚೇತರಿಕೆಗೆ ಪರಿಣಾಮಕಾರಿ ಆಗುವ ಬಗೆಗಿನ ಅನಿಶ್ಚಿತತೆಯು ನಕಾರಾತ್ಮಕ ವಹಿವಾಟಿಗೆ ಕಾರಣವಾಗಿದೆ.

ವಿದೇಶಿ ಬಂಡವಾಳ ಹೊರಹರಿವು ಸಹ ಸೂಚ್ಯಂಕಗಳನ್ನು ಇಳಿಕೆ ಕಾಣುವಂತೆ ಮಾಡಿದೆ.

ರೂಪಾಯಿ: ವಾರದ ವಹಿವಾಟಿನಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 4 ಪೈಸೆ ಇಳಿಕೆ ಕಂಡಿದ್ದು, ಒಂದು ಡಾಲರ್‌ಗೆ ₹ 75.54ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT