ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ದಿನಗಳಲ್ಲಿ ಕರಗಿದ ₹15.72 ಲಕ್ಷ ಕೋಟಿ ಸಂಪತ್ತು

Last Updated 19 ಮಾರ್ಚ್ 2020, 1:40 IST
ಅಕ್ಷರ ಗಾತ್ರ

ಮುಂಬೈ: ಕೊರೊನಾ ಸೃಷ್ಟಿಸಿರುವ ಭೀತಿಯಿಂದಾಗಿ ದೇಶದ ಷೇರುಪೇಟೆಯಲ್ಲಿ ಮೂರು ದಿನಗಳಿಂದ ಭಾರಿ ಕುಸಿತ ಕಂಡು ಬರುತ್ತಿದೆ. ಸೋಮವಾರದಿಂದ ಬುಧವಾರದವರೆಗೆ ನಡೆದಿರುವ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ₹ 15.72 ಲಕ್ಷ ಕೋಟಿಗಳಷ್ಟು ಕರಗಿದ್ದು, ಷೇರುಪೇಟೆಯ ಬಂಡವಾಳ ಮೌಲ್ಯ ₹ 113.53 ಲಕ್ಷ ಕೋಟಿಗೆ ತಲುಪಿದೆ.

ಬುಧವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 1,710 ಅಂಶಗಳಷ್ಟು ಕುಸಿತ ಕಂಡು 28,869 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು. 2017ರ ಜನವರಿ ಬಳಿಕ ದಾಖಲಾಗಿರುವ ಕನಿಷ್ಠ ಮಟ್ಟ ಇದಾಗಿದೆ. ಮೂರು ದಿನಗಳಲ್ಲಿ ಒಟ್ಟಾರೆ5,234 ಅಂಶ ಕುಸಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT