ಷೇರುಪೇಟೆ: ನಿಫ್ಟಿ ಸಾರ್ವಕಾಲಿಕ ದಾಖಲೆ
ಮುಂಬೈ: ಷೇರುಪೇಟೆಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಮಂಗಳವಾರದ ವಹಿವಾಟಿನಲ್ಲಿ ಹೊಸ ಸಾರ್ವಕಾಲಿಕ ದಾಖಲೆ ಬರೆದವು. ಬ್ಯಾಂಕಿಂಗ್, ಹಣಕಾಸು, ರಿಯಲ್ ಎಸ್ಟೇಟ್ ಮತ್ತು ಆಟೊಮೊಬೈಲ್ ವಲಯಗಳ ಷೇರುಗಳ ಖರೀದಿ ಭರದಿಂದ ನಡೆದ ಪರಿಣಾಮವಾಗಿ ಸೂಚ್ಯಂಕಗಳು ಏರಿಕೆ ಕಂಡವು.
ರೂಪಾಯಿ ಮೌಲ್ಯವು ಡಾಲರ್ ಎದುರು ಚೇತರಿಸಿಕೊಂಡಿದ್ದು ಕೂಡ ಮಾರುಕಟ್ಟೆಯಲ್ಲಿ ಉತ್ಸಾಹದ ವಾತಾವರಣ ಸೃಷ್ಟಿಸಿತು ಎಂದು ವರ್ತಕರು ತಿಳಿಸಿದ್ದಾರೆ. ದಿನದ ವಹಿವಾಟಿನ ನಡುವಿನಲ್ಲಿ ದಾಖಲೆಯ 44,601 ಅಂಶಗಳಿಗೆ ತಲುಪಿದ್ದ ಸೆನ್ಸೆಕ್ಸ್, ಕೊನೆಯಲ್ಲಿ 445 ಅಂಶಗಳಷ್ಟು ಏರಿಕೆ ಕಂಡು 44,523 ಅಂಶಗಳಲ್ಲಿ ವಹಿವಾಟು ಅಂತ್ಯಗೊಳಿಸಿತು.
128 ಅಂಶ ಏರಿಕೆ ಕಂಡ ನಿಫ್ಟಿ, ಇದೇ ಮೊದಲ ಬಾರಿಗೆ 13 ಸಾವಿರ ಅಂಶಗಳಿಗಿಂತ ಹೆಚ್ಚಿನ ಮಟ್ಟದಲ್ಲಿ ವಹಿವಾಟು ಅಂತ್ಯಗೊಳಿಸಿತು. ಎಕ್ಸಿಸ್ ಬ್ಯಾಂಕ್ ಷೇರುಗಳು ಅತಿಹೆಚ್ಚು ಮೌಲ್ಯವರ್ಧಿಸಿಕೊಂಡವು. ಮಹೀಂದ್ರ ಆ್ಯಂಡ್ ಮಹೀಂದ್ರ, ಎಚ್‌ಡಿಎಫ್‌ಸಿ ಬ್ಯಾಂಕ್, ಐಟಿಸಿ, ಎಸ್‌ಬಿಐ, ಐಸಿಐಸಿಐ ಬ್ಯಾಂಕ್, ಮಾರುತಿ ಸುಜುಕಿ, ಕೋಟಕ್ ಬ್ಯಾಂಕ್ ಮತ್ತು ಸನ್ ಫಾರ್ಮಾ ಷೇರುಗಳು ಕೂಡ ಮೌಲ್ಯ ಹೆಚ್ಚಿಸಿಕೊಂಡವು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.