ಗುರುವಾರ , ಫೆಬ್ರವರಿ 27, 2020
19 °C

ದಾಖಲೆ ಮಟ್ಟದ ವಹಿವಾಟು: ಹೂಡಿಕೆದಾರರ ಸಂಪತ್ತು ₹2.9 ಲಕ್ಷ ಕೋಟಿ ವೃದ್ಧಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ದೇಶದ ಷೇರುಪೇಟೆಗಳಲ್ಲಿ ದಾಖಲೆಯ ಮಟ್ಟದ ವಹಿವಾಟು ನಡೆಯುತ್ತಿದ್ದು, ಹೂಡಿಕೆದಾರರ ಸಂಪತ್ತು ಮೌಲ್ಯದಲ್ಲಿಯೂ ಏರಿಕೆಯಾಗುತ್ತಿದೆ. 

ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ, ಜ. 10ರಿಂದ 17ರವರೆಗೆ ನಡೆದಿರುವ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತಿನಲ್ಲಿ ₹2.9 ಲಕ್ಷ ಕೋಟಿ ಹೆಚ್ಚಾಗಿದೆ. ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ ₹157.67 ಲಕ್ಷ ಕೋಟಿಗಳಿಂದ ₹160.57 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ. ಜನವರಿ 1 ರಿಂದ 17ರವರೆಗಿನ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತಿನಲ್ಲಿ ₹4.75 ಲಕ್ಷ ಕೋಟಿಗಳಷ್ಟು ಹೆಚ್ಚಳವಾಗಿದೆ.

ವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 345 ಅಂಶ ಏರಿಕೆ ಕಂಡಿದ್ದು, 41,945 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 95 ಅಂಶ ಹೆಚ್ಚಾಗಿ 12,352 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯಗೊಂಡಿದೆ.

ಎಫ್‌ಪಿಐ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ವಾರದ ವಹಿವಾಟಿನ ಏರಿಳಿತಕ್ಕೆ ಅನುಗುಣವಾಗಿ ಷೇರುಗಳ ಖರೀದಿ ಮತ್ತು ಮಾರಾಟಕ್ಕೆ ಗಮನ ನಡೆಸಿದ್ದಾರೆ. ಇದರಿಂದ ಒಟ್ಟಾರೆಯಾಗಿ ವಾರದ ಹೂಡಿಕೆ ₹268 ಕೋಟಿಗಳಷ್ಟಾಗಿದೆ.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯ ವಾರದ ವಹಿವಾಟಿನಲ್ಲಿ, ಡಾಲರ್‌ ಎದುರು ರೂಪಾಯಿ ಮೌಲ್ಯ 14 ಪೈಸೆ ಹೆಚ್ಚಾಗಿದ್ದು, ಒಂದು ಡಾಲರ್‌ಗೆ ₹71.08ಕ್ಕೆ ತಲುಪಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು