ಮಂಗಳವಾರ, ಅಕ್ಟೋಬರ್ 22, 2019
23 °C
ಸತತ ಮೂರನೇ ವಾರವೂ ನಕಾರಾತ್ಮಕ ಚಲನೆ

ಮೂರನೇ ವಾರವೂ ಚೇತರಿಸಿಕೊಳ್ಳದ ಷೇರುಪೇಟೆ

Published:
Updated:

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಮೂರನೇ ವಾರವೂ ನಕಾರಾತ್ಮಕ ಚಟುವಟಿಕೆ ಮುಂದುವರಿಯಿತು.

ಐದು ದಿನಗಳ ವಹಿವಾಟಿ
ನಲ್ಲಿ (ಜೂನ್‌ 17–21) ಹೂಡಿಕೆದಾರರ ಸಂಪತ್ತು ಮೌಲ್ಯ ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ₹ 1 ಲಕ್ಷ ಕೋಟಿಗಳಷ್ಟು ಕರಗಿದೆ. ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ ₹ 152 ಲಕ್ಷ ಕೋಟಿಗಳಿಂದ ₹ 151 ಲಕ್ಷ ಕೋಟಿಗೆ ಇಳಿಕೆಯಾಗಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) ವಾರದ ವಹಿವಾಟಿನಲ್ಲಿ 258 ಅಂಶ ಇಳಿಕೆಯಾಗಿದ್ದು, 39,194 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಅಮೆರಿಕದ ಫೆಡರಲ್‌ ರಿಸರ್ವ್‌ ಹಣಕಾಸು ನೀತಿ ಪರಾಮರ್ಶೆಯಲ್ಲಿ ಬಡ್ಡಿ ದರದಲ್ಲಿ ಬದಲಾವಣೆ ಮಾಡಿಲ್ಲ. ಆದರೆ, ಆರ್ಥಿಕ ಪ್ರಗತಿಗೆ ಬೆಂಬಲ ನೀಡಲು ಮುಂದಿನ ತಿಂಗಳಿನಿಂದ ಬಡ್ಡಿದರ ಕಡಿತದ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದೆ. ಹೀಗಾಗಿ, ಗುರುವಾರ ಸಂವೇದಿ ಸೂಚ್ಯಂಕ 489 ಅಂಶ ಜಿಗಿತ ಕಂಡಿತ್ತು. ಆದರೆ ಶುಕ್ರವಾರದ ವಹಿವಾಟಿನಲ್ಲಿ ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಸ್ಥಿತಿಯಿಂದ 407 ಅಂಶ ಇಳಿಯಿತು. ಇದರಿಂದ ಒಟ್ಟಾರೆ ವಾರದ ವಹಿವಾಟು ನಕಾರಾತ್ಮಕ ಹಾದಿ ಹಿಡಿಯುವಂತಾಯಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 99 ಅಂಶ ಇಳಿಕೆ ಕಂಡು 11,724 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯಕಂಡಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)