ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರದ ವಹಿವಾಟು ನಕಾರಾತ್ಮಕ ಅಂತ್ಯ

Last Updated 26 ಅಕ್ಟೋಬರ್ 2019, 19:30 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳ ವಾರದ ವಹಿವಾಟು ನಕಾರಾತ್ಮಕ ಅಂತ್ಯ ಕಂಡಿದೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಕಾರಣದಿಂದಾಗಿ ಸೋಮವಾರ ವಹಿವಾಟಿಗೆ ರಜೆ ಇತ್ತು. ಹೀಗಾಗಿ ನಾಲ್ಕು ದಿನಗಳು ಮಾತ್ರವೇ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ ವಾರದ ವಹಿವಾಟಿನಲ್ಲಿ 240 ಅಂಶ ಇಳಿಕೆ ಕಂಡು 39,058 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 78 ಅಂಶ ಇಳಿಕೆಯಾಗಿ 11,583 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಕಂಪನಿಗಳ ಎರಡನೇ ತ್ರೈಮಾಸಿಕದ ಫಲಿತಾಂಶ ಪ್ರಕಟಣೆ ಆರಂಭವಾಗಿರುವುದರಿಂದ ನಿಫ್ಟಿಯು 11 ಸಾವಿರದಿಂದ 11,700ರ ಆಸುಪಾಸಿನಲ್ಲಿ ವಹಿವಾಟು ನಡೆಸುವ ನಿರೀಕ್ಷೆ ಇದೆ ಎಂದು ತಜ್ಞರು ಹೇಳಿದ್ದಾರೆ.

ವಲಯವಾರು ವಾಹನ, ರಿಯಲ್‌ ಎಸ್ಟೇಟ್‌ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳು ಉತ್ತಮ ಪ್ರದರ್ಶನ ತೋರುವ ಸಾಧ್ಯತೆ ಇದೆ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT