ಶನಿವಾರ, ಜುಲೈ 31, 2021
25 °C

ಗಡಿ ಬಿಕ್ಕಟ್ಟು: ಭಾರಿ ಏರಿಳಿತ ಕಂಡ ಷೇರುಪೇಟೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಭಾರತ–ಚೀನಾ ಗಡಿ ಸಂಘರ್ಷ ಹಾಗೂ ಕೋವಿಡ್‌-19 ಪ್ರಕರಣಗಳಲ್ಲಿ ಆಗುತ್ತಿರುವ ಏರಿಕೆಯು ದೇಶದ ಷೇರುಪೇಟೆಗಳಲ್ಲಿ ಬುಧವಾರ ನಕಾರಾತ್ಮಕ ವಹಿವಾಟು ನಡೆಯುವಂತೆ ಮಾಡಿದೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌, ದಿನದ ವಹಿವಾಟಿನಲ್ಲಿ 601 ಅಂಶಗಳಷ್ಟು ಏರಿಳಿತ ಕಂಡಿತು. ಅಂತಿಮವಾಗಿ 97 ಅಂಶಗಳ ಇಳಿಕೆಯೊಂದಿಗೆ 33,508 ಅಂಶಗಳಿಗೆ ತಲುಪಿತು.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 33 ಅಂಶ ಇಳಿಕೆಯಾಗಿ 9,881 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ದಿನದ ವಹಿವಾಟಿನಲ್ಲಿ ಕೋಟಕ್‌ ಬ್ಯಾಂಕ್‌ ಷೇರು ಶೇ 2ರಷ್ಟು ಇಳಿಕೆ ಕಂಡಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು