ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆಗಳಲ್ಲಿ ಎರಡನೇ ದಿನವೂ ಸಕಾರಾತ್ಮಕ ವಹಿವಾಟು; ರೂಪಾಯಿ ದರ ಇಳಿಕೆ

Last Updated 6 ಅಕ್ಟೋಬರ್ 2022, 11:24 IST
ಅಕ್ಷರ ಗಾತ್ರ

ಮುಂಬೈ: ಲೋಹ, ಐ.ಟಿ. ಮತ್ತು ಬಂಡವಾಳ ಸರಕುಗಳ ಷೇರುಗಳ ಉತ್ತಮ ಗಳಿಕೆಯಿಂದಾಗಿ ಗುರುವಾರ ದೇಶದ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯಿತು.

ವಿದೇಶಿ ಬಂಡವಾಳ ಒಳಹರಿವು ಸಹ ಸೂಚ್ಯಂಕಗಳ ಏರಿಕೆಗೆ ಕಾರಣವಾಯಿತು. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 156 ಅಂಶ ಹೆಚ್ಚಾಗಿ 58,220 ಅಂಶಗಳಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿತು. ವಹಿವಾಟಿನ ಒಂದು ಹಂತದಲ್ಲಿ ಸೆನ್ಸೆಕ್ಸ್‌ 513 ಅಂಶಗಳಷ್ಟು ಏರಿಕೆ ಕಂಡಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 57 ಅಂಶ ಏರಿಕೆ ಕಂಡು 17,332 ಅಂಶಗಳಿಗೆ ತಲುಪಿತು.

ಸೆನ್ಸೆಕ್ಸ್‌ನಲ್ಲಿ ಟಾಟಾ ಸ್ಟೀಲ್‌, ಲಾರ್ಸನ್‌ ಆ್ಯಂಡ್‌ ಟೂರ್ಬೊ, ಐಸಿಐಸಿಐ ಬ್ಯಾಂಕ್‌, ಎಚ್‌ಸಿಎಲ್‌ ಟೆಕ್ನಾಲಜೀಸ್‌, ಇನ್ಫೊಸಿಸ್‌ ಮತ್ತು ಎಕ್ಸಿಸ್‌ ಬ್ಯಾಂಕ್‌ ಷೇರುಗಳ ಮೌಲ್ಯ ಹೆಚ್ಚಾಯಿತು.

ಜಾಗತಿಕ ಮಾರುಕಟ್ಟೆಗಳಲ್ಲಿ ಏರಿಳಿತ ಮತ್ತು ಕಚ್ಚಾ ತೈಲ ದರ ಏರಿಕೆಯ ನಡುವೆಯೂ ಭಾರತದ ಷೇರುಪೇಟೆಗಳು ಚೇತರಿಕೆ ಕಂಡುಕೊಂಡಿವೆ. ದೇಶಿ ಮತ್ತು ವಿದೇಶಿ ಹೂಡಿಕೆದಾರರು ಷೇರುಪೇಟೆ ಏರಿಕೆಗೆ ನೆರವಾಗುತ್ತಿದ್ದಾರೆ ಎಂದು ಜಿಯೋಜಿತ್‌ ಹಣಕಾಸು ಸೇವೆಗಳ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಹೇಳಿದ್ದಾರೆ.

ಏಷ್ಯಾದ ಮಾರಕಟ್ಟೆಯಲ್ಲಿ, ಸೋಲ್‌ ಮತ್ತು ಟೋಕಿಯೊ ಷೇರುಪೇಟೆಗಳು ಗಳಿಕೆ ಕಂಡರೆ, ಶಾಂಘೈ ಮತ್ತು ಹಾಂಗ್‌ಕಾಂಗ್ ಷೇರುಪೇಟೆಗಳ ವಹಿವಾಟು ಇಳಿಕೆ ಕಂಡಿತು.

ರೂಪಾಯಿ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಗುರುವಾರ 32 ಪೈಸೆ ಇಳಿಕೆ ಕಂಡು ಒಂದು ಡಾಲರ್‌ಗೆ ₹81.94ಕ್ಕೆ (ತಾತ್ಕಾಲಿಕ ಮಾಹಿತಿ) ತಲುಪಿತು. ಸಾರ್ವಕಾಲಿಕ ಕನಿಷ್ಠ ಮಟ್ಟ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT