ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇ–ಮೇಲ್ ಕಳುಹಿಸಿ 380 ಉದ್ಯೋಗಿಗಳನ್ನು ವಜಾಗೊಳಿಸಿದ ‘ಸ್ವಿಗ್ಗಿ’

Last Updated 20 ಜನವರಿ 2023, 8:38 IST
ಅಕ್ಷರ ಗಾತ್ರ

ನವದೆಹಲಿ: 380 ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ ಮೊಬೈಲ್ ಆ್ಯಪ್ ಆಧಾರಿತ ಆಹಾರ ಪೂರೈಕೆ ಕಂಪನಿ ‘ಸ್ವಿಗ್ಗಿ’ ಶುಕ್ರವಾರ ತಿಳಿಸಿದೆ.

ಭಾರತದ ಸ್ಟಾರ್ಟ್ ಅಪ್ ಉದ್ಯಮಗಳಲ್ಲಿ ಉದ್ಯೋಗಿಗಳ ವಜಾಗೊಳಿಸಿರುವ ಕಂಪನಿಗಳ ಪಟ್ಟಿಗೆ ಇದೀಗ ಸ್ವಿಗ್ಗಿ ಸೇರ್ಪಡೆಯಾಗಿದೆ.

ಕಂಪನಿ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಆದಾಯ ಕುಸಿತವು ಉದ್ಯೋಗ ಕಡಿತಕ್ಕೆ ಕಾರಣವಾಗಿದೆ. ಪುನರ್​​ರಚನೆ ಪ್ರಕ್ರಿಯೆಯ ಭಾಗವಾಗಿ ನಮ್ಮ ತಂಡದ ಗಾತ್ರವನ್ನು ಕಡಿಮೆ ಮಾಡಲು ನಾವು ತುಂಬಾ ಕಷ್ಟಕರವಾದ ನಿರ್ಧಾರವನ್ನು ಜಾರಿಗೊಳಿಸುತ್ತಿದ್ದೇವೆ ಎಂದು ಎಂದು ಸ್ವಿಗ್ಗಿ ಸಂಸ್ಥಾಪಕ, ಸಿಇಒ ಶ್ರೀಹರ್ಷ ಮೆಜೆಟಿ ತಿಳಿಸಿದ್ದಾರೆ.

ಈ ಪ್ರಕ್ರಿಯೆಯಲ್ಲಿ, ನಾವು 380 ಪ್ರತಿಭಾವಂತ ಸ್ವಿಗ್‌ಸ್ಟರ್‌ಗಳಿಗೆ ವಿದಾಯ ಹೇಳುತ್ತೇವೆ. ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಅನ್ವೇಷಿಸಿದ ನಂತರ ಇದು ಅತ್ಯಂತ ಕಷ್ಟಕರವಾದ ನಿರ್ಧಾರವಾಗಿದೆ. ಈ ಕುರಿತು ನಾನು ವಿಷಾದಿಸುತ್ತೇನೆ ಎಂದು ಶ್ರೀಹರ್ಷ ಉದ್ಯೋಗಿಗಳಿಗೆ ಇಮೇಲ್‌ನಲ್ಲಿ ತಿಳಿಸಿರುವುದಾಗಿ ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಇತ್ತೀಚೆಗೆ ಇ–ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿ, ಭಾರತದಲ್ಲಿ 1 ಸಾವಿರ ಸೇರಿದಂತೆ ಜಾಗತಿಕವಾಗಿ 18 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಾಗಿ ಹೇಳಿತ್ತು.

ಎಚ್‌ಪಿ, ಮೆಟಾ, ಮತ್ತು ಟ್ವಿಟರ್‌ನಂತಹ ಕಂಪನಿಗಳು ಕೂಡ ವೆಚ್ಚ ತಗ್ಗಿಸುವ ಹಿನ್ನೆಲೆಯಲ್ಲಿ ಉದ್ಯೋಗ ಕಡಿತದ ಮೊರೆ ಹೋಗಿವೆ.

ಮೆಟಾ ಮಾಲೀಕತ್ವದ ಫೇಸ್‌ಬುಕ್‌ ಕಂಪನಿಯು 11 ಸಾವಿರ ನೌಕರರನ್ನು ಕೆಲಸದಿಂದ ತೆಗೆಯುವುದಾಗಿ ಹೇಳಿತ್ತು. ಟ್ವಿಟರ್ ಕಂಪನಿಯು ಉದ್ಯಮಿ ಇಲಾನ್‌ ಮಸ್ಕ್ ಅವರ ತೆಕ್ಕೆಗೆ ಸೇರಿದ ನಂತರದಲ್ಲಿ ಶೇಕಡ 50ರಷ್ಟು ನೌಕರರನ್ನು ಕೆಲಸದಿಂದ ತೆಗೆದುಹಾಕಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT