ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿಯಲ್ಲಿ ₹ 50

Last Updated 27 ಜುಲೈ 2015, 19:30 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಈರುಳ್ಳಿ ಬೆಲೆ ಕೆ.ಜಿ.ಗೆ ₹50ಕ್ಕೆ ಏರಿಯಾಗಿದ್ದು, ಗ್ರಾಹಕರ ಜೇಬಿಗೆ ಬಿಸಿ ಮುಟ್ಟಿಸಿದೆ.
ಇಲ್ಲಿನ ಗಂಜ್ ಪ್ರದೇಶದಲ್ಲಿರುವ ಎಪಿಎಂಸಿಗೆ ಈರುಳ್ಳಿ ಆವಕ ಆಗುವುದಿಲ್ಲವಾದರೂ, ಸೂಪರ್ ಮಾರ್ಕೆಟ್‌ನಲ್ಲಿ ಈರುಳ್ಳಿ ಹರಾಜು ಮತ್ತು ಮಾರಾಟಕ್ಕೆ ಸ್ಥಳಾವಕಾಶ ಕಲ್ಪಿಸಲಾಗಿದೆ.

‘ಜಿಲ್ಲೆಯ ಆಳಂದ, ಚಿಂಚೋಳಿ ಮತ್ತು ಅಫಜಲಪುರದ ಕೆಲ ಭಾಗದಲ್ಲಿ ಮಾತ್ರ ಈರುಳ್ಳಿ ಬೆಳೆಯಲಾಗುತ್ತದೆ. ಇನ್ನುಳಿದಂತೆ ಪುಣೆ, ಕರ್ನೂಲ್ ಸೇರಿದಂತೆ ಇತರೆ ಭಾಗಗಳಿಂದ ಈರುಳ್ಳಿ ಆವಕ ಮಾಡಿಕೊಳ್ಳಲಾಗುತ್ತದೆ’ ಎಂದು ಕೃಷಿ ಇಲಾಖೆ ಮೂಲಗಳು ಹೇಳುತ್ತವೆ.

‘ಕ್ವಿಂಟಲ್ ಈರುಳ್ಳಿಗೆ ಮಾರುಕಟ್ಟೆಯಲ್ಲಿ ಸದ್ಯ ₹ 2,200ರಿಂದ ₹3 ಸಾವಿರ ದರವಿದೆ. ಆದರೆ, ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ₹40ರಿಂದ ₹50ರವರೆಗೂ ಧಾರಣೆ ಇದೆ. ಇದರಿಂದ ಮಧ್ಯವರ್ತಿಗಳಿಗೆ ಲಾಭವೇ ಹೊರತು, ರೈತರಿಗಲ್ಲ’ ಎಂದು ರೈತರು ಹೇಳುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT