ಬೆಂಗಳೂರಿನಲ್ಲಿ ಆಯೋಜಿಸಿದ್ದ ಮೊದಲ ಡೀಲರ್ಶಿಪ್ ಎಕ್ಸ್ಪೀರಿಯನ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದಕ್ಷಿಣ ಭಾರತವು ಅಭಿವೃದ್ಧಿಗೊಂಡಿರುವ ಮಾರುಕಟ್ಟೆಯಾಗಿದೆ. ಇಲ್ಲಿನ ಗ್ರಾಹಕರು ಹೊಸ ಉತ್ಪನ್ನಗಳನ್ನು ಪರೀಕ್ಷಿಸಲು ಸದಾ ಉತ್ಸುಕರಾಗಿರುತ್ತಾರೆ. ನಮ್ಮ ಪ್ರಾರಂಭಿಕ ಮಾರಾಟಕ್ಕೆ ಈ ಮಾರುಕಟ್ಟೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುವ ನಿರೀಕ್ಷೆಯಲ್ಲಿದ್ದೇವೆ’ ಎಂದು ಹೇಳಿದ್ದಾರೆ.