ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಜಾ ದಿನದಲ್ಲೂ ಐ. ಟಿ ರಿಟರ್ನ್ಸ್‌ ಸಲ್ಲಿಕೆಗೆ ಅವಕಾಶ

Last Updated 27 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ತಿಂಗಳಾಂತ್ಯದಲ್ಲಿನ ಮೂರು ಸರ್ಕಾರಿ ರಜಾ ದಿನಗಳಲ್ಲಿಯೂ (ಮಾ. 29, 30 ಮತ್ತು 31) ಆದಾಯ ತೆರಿಗೆ ಲೆಕ್ಕಪತ್ರ (ಐ.ಟಿ ರಿಟರ್ನ್ಸ್‌) ಸಲ್ಲಿಕೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಆದಾಯ ತೆರಿಗೆ ಇಲಾಖೆ ಕಚೇರಿಗಳು ಮತ್ತು  ಸೇವಾ ಕೇಂದ್ರಗಳು (ಎಕೆಎಸ್‌) ಮಾರ್ಚ್‌ 29 ರಿಂದ 31ರವರೆಗೂ ಕಾರ್ಯನಿರ್ವಹಿಸಲಿವೆ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.

2016–17 ಮತ್ತು 2017–18ನೇ ಹಣಕಾಸು ವರ್ಷದ ಲೆಕ್ಕಪತ್ರ ಮಾಹಿತಿ ಸಲ್ಲಿಸಲು ಹಾಗೂ 2017–18ನೇ ಹಣಕಾಸು ವರ್ಷದ ಪರಿಷ್ಕೃತ ಲೆಕ್ಕಪತ್ರ ಮಾಹಿತಿ ಸಲ್ಲಿಸಲು ಮಾರ್ಚ್‌ 31 ಕಡೆಯ ದಿನವಾಗಿದೆ.

ಆದರೆ, ಮಹಾವೀರ ಜಯಂತ್ರಿ ಮತ್ತು ಗುಡ್‌ ಫ್ರೈಡೆ ಪ್ರಯುಕ್ತ ಗುರುವಾರ (ಮಾ. 29) ಮತ್ತು ಶುಕ್ರವಾರ (ಮಾ. 30) ಸರ್ಕಾರಿ ರಜಾ ದಿನ. ಶನಿವಾರ ಹಣಕಾಸು ವರ್ಷದ ಅಂತಿಮ ದಿನ. ಈ ಮೂರು ದಿನಗಳ ಕಾಲ ತೆರಿಗೆ ಪಾವತಿದಾರರಿಗೆ ಯಾವುದೇ ಅನನುಕೂಲ ಆಗದಂತೆ ನೋಡಿಕೊಳ್ಳಲು ಈ ನಿರ್ಧಾರಕ್ಕೆ ಬರಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT