ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯ ಬ್ಯಾಂಕ್‌ನ ಟ್ವಿಟರ್ ಫೇಸ್‌ಬುಕ್‌ ಖಾತೆ ಆರಂಭ

Last Updated 29 ಜೂನ್ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ವಿಜಯ ಬ್ಯಾಂಕ್‌,   ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಪೊರೇಟ್‌ ಪುಟಗಳನ್ನು ತೆರೆದಿದೆ.
‘#HivijayaBank ಮೂಲಕ ವಿಜಯ ಬ್ಯಾಂಕ್‌ನ ಸಾಮಾಜಿಕ ಜಾಲತಾಣ ಪುಟಕ್ಕೆ ಸಂಪರ್ಕ ಪಡೆಯಬಹುದು. ಟ್ವಿಟರ್, ಫೇಸ್‌ಬುಕ್‌, ಲಿಂಕ್ಡ್‌ಇನ್, ಇನ್‌ಸ್ಟಾಗ್ರಾಂ, ಯುಟ್ಯೂಬ್‌  ಮೂಲಕ  ಡಿಜಿಟಲ್‌ ಜಗತ್ತಿನಲ್ಲಿ ಇನ್ನೊಂದು ಆಯಾಮಕ್ಕೆ ತೆರೆದುಕೊಂಡಿದ್ದೇವೆ. ಇದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೊಸ ಇತಿಹಾಸ ಸೃಷ್ಟಿಗೆ ಕಾರಣವಾಗಿದೆ.

ಈ ಮೂಲಕ ಗ್ರಾಹಕರಿಗೆ ಇನ್ನೂ ಉತ್ತಮ ಸೇವೆಗಳನ್ನು  ನೀಡುವ ಗುರಿ ಇಟ್ಟುಕೊಳ್ಳಲಾಗಿದೆ. ಇಲ್ಲಿ ಬರುವ ಮೆಚ್ಚುಗೆ, ಟೀಕೆಗಳೆಲ್ಲವನ್ನೂ ಅಭಿವೃದ್ಧಿಗೆ ಪೂರಕವಾಗಿ ಬಳಸಿಕೊಳ್ಳಲಾಗುವುದು’ ಎಂದು  ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಕಿಶೋರ್‌ ಸಾನ್ಸಿ ತಿಳಿಸಿದರು.

‘ಯುವಜನತೆ, ಹೆಚ್ಚು ತಂತ್ರಜ್ಞಾನ ಬಳಕೆ ಮಾಡುವವರಿಗೆ ಹಾಗೂ ಬ್ಯಾಂಕಿಂಗ್‌ ಉತ್ಪನ್ನಗಳು ಮತ್ತು ಸೇವೆಗಳನ್ನು ಬಳಸುವವರ ಅಗತ್ಯಗಳನ್ನು ಪೂರೈಸಲು ಈ ಹೆಜ್ಜೆ ಇಡಲಾಗಿದೆ’ ಎಂದರು. ‘ಗ್ರಾಹಕರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಲು ಮತ್ತು ಅವರ ಸಲಹೆ, ಅಭಿಪ್ರಾಯಗಳನ್ನು ಪಡೆದು ಇನ್ನೂ ಉತ್ತಮ ರೀತಿಯಲ್ಲಿ ಸೇವೆಯನ್ನು ಒದಗಿಸಲು ಈ ಸಾಮಾಜಿಕ ಮಾಧ್ಯಮ ಗಳು ಹೆಚ್ಚು ಉಪಯಕ್ತವಾಗಲಿವೆ’ ಎಂದು ತಿಳಿಸಿದರು.

ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕರುಗಳಾದ ಬಿ.ಎಸ್. ರಾಮರಾವ್ ಮತ್ತು ನಾಗೇಶ್ವರ ರಾವ್‌  ಮತ್ತಿತರರು ಕಾರ್ಯಕ್ರಮದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT