ಬೆಂಗಳೂರು: ರಾಜ್ಯ ಸರ್ಕಾರವು ಶೀಘ್ರದಲ್ಲಿಯೇ ಹೊಸ ಗ್ರಾಮೀಣ ಹೊರಗುತ್ತಿಗೆ ನೀತಿ (ಬಿಪಿಒ) ಅನಾವರಣ ಮಾಡಲಿದೆ.

ಈ ತಿಂಗಳ 18ರಿಂದ ನಗರದಲ್ಲಿ ನಡೆಯಲಿರುವ 14ನೇ ಐ.ಟಿ ಮೇಳದ ಸಂದರ್ಭದಲ್ಲಿ ಈ ನೀತಿ ಪ್ರಕಟಗೊಳ್ಳಲಿದೆ ಎಂದು ಮಾಹಿತಿ ತಂತ್ರಜ್ಞಾನ ಪ್ರಧಾನ ಕಾರ್ಯದರ್ಶಿ ಎಂ. ಎನ್. ವಿದ್ಯಾಶಂಕರ್ ಹೇಳಿದ್ದಾರೆ.
ಐ.ಟಿ ಮೇಳ ಕುರಿತು ಮಾಹಿತಿ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಈ ವಿಷಯ ತಿಳಿಸಿದರು.

ರಾಜ್ಯದಲ್ಲಿನ ದೊಡ್ಡ ಹೊರಗುತ್ತಿಗೆ ಸಂಸ್ಥೆಗಳ ಜತೆ ಕೆಲಸ ಮಾಡಲು ಗ್ರಾಮೀಣ ಉದ್ಯಮಿಗಳನ್ನು ಉತ್ತೇಜಿಸುವುದರ ಮೂಲಕ ಹೊರಗುತ್ತಿಗೆ ಉದ್ದಿಮೆ - ವಹಿವಾಟನ್ನು ಇನ್ನಷ್ಟು ವಿಸ್ತರಿಸಲು ಈ ಹೊಸ ಹೊರಗುತ್ತಿಗೆ ಯೋಜನೆ ನೆರವಾಗುವ ನಿರೀಕ್ಷೆ ಇದೆ ಎಂದರು.

ಈಗಾಗಲೇ ರಾಜ್ಯ ಸರ್ಕಾರವು ಕನಿಷ್ಠ 100 ಮಂದಿ ಉದ್ಯೋಗಿಗಳನ್ನು ಹೊಂದಿರುವ ಪ್ರತಿಯೊಂದು ಗ್ರಾಮೀಣ ಹೊರಗುತ್ತಿಗೆ ಉದ್ಯಮಗಳಿಗೆ ರೂ 40 ಲಕ್ಷದಂತೆ ಸಬ್ಸಿಡಿ ನೀಡುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಈ ಉದ್ಯಮ ಉತ್ತೇಜಿಸಲು ಮತ್ತು ಉದ್ಯೋಗ ಅವಕಾಶ ಹೆಚ್ಚಿಸಲು ನೀಡಲಾಗುವ ಈ ಸಬ್ಸಿಡಿ ಪಡೆಯಲು ಈಗ ಉದ್ಯೋಗಿಗಳ ಸಂಖ್ಯೆಯ ಮಿತಿಯನ್ನು 50ಕ್ಕೆ ಇಳಿಸಲಾಗಿದೆ.

ಸದ್ಯಕ್ಕೆ ರಾಜ್ಯದಲ್ಲಿ ರಾಜ್ಯ ಸರ್ಕಾರಿ ಪ್ರಾಯೋಜಕತ್ವದ 31 ಹೊರಗುತ್ತಿಗೆ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, 3,100 ಜನರು ಉದ್ಯೋಗ ಅವಕಾಶ ಪಡೆದುಕೊಂಡಿದ್ದಾರೆ ಎಂದು ವಿದ್ಯಾಶಂಕರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.