ನ್ಯೂಯಾರ್ಕ್ (ಪಿಟಿಐ): ಜಾಗತಿಕ ಆರ್ಥಿಕ ಪರಿಸ್ಥಿತಿಯು ಕಳವಳಕಾರಿಯಾಗಿದ್ದರೂ, ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ವೃದ್ಧಿ ದರವು (ಜಿಡಿಪಿ) ಶೇ 8ರಷ್ಟು ಸಾಧ್ಯವಾಗಲಿದೆ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ವಿಶ್ವಾಸ ವ್ಯಕ್ತಪಡಿಸಿದ್ದಾದೆ.

ಮೊದಲ ತ್ರೈಮಾಸಿಕದಲ್ಲಿ `ಜಿಡಿಪಿ~ ದರ ಶೇ 7.7ರಷ್ಟು ದಾಖಲಾಗಿ ನಿರಾಶೆ ಮೂಡಿಸಿದ್ದರೂ, ವರ್ಷಾಂತ್ಯದಲ್ಲಿ ಶೇ 8ರಷ್ಟು ವೃದ್ಧಿ ಸಾಧ್ಯವಾಗಲಿದೆ ಎಂದರು. ಉತ್ತಮ ಮುಂಗಾರಿನ ಫಲವಾಗಿ ಕೃಷಿ ಉತ್ಪಾದನೆಯು ಶೇ 4ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇರಲಿದೆ. ತಯಾರಿಕೆ ಮತ್ತು ಸೇವಾ ರಂಗದಲ್ಲಿನ ಬೆಳವಣಿಗೆಯು ಶೇ 8ರಷ್ಟು ಆರ್ಥಿಕ ಬೆಳವಣಿಗೆ ಸಾಧ್ಯತೆ ನಿಜ ಮಾಡಲಿದೆ.

12ನೇ ಪಂಚವಾರ್ಷಿಕ ಯೋಜನಾ ಅವಧಿಯಲ್ಲಿ ಶೇ 9ರಷ್ಟು ವೃದ್ಧಿ ದರ ಸಾಧಿಸುವ ಗುರಿ ನಿಗದಿಪಡಿಸಲಾಗಿದೆ. ಈ ಉದ್ದೇಶ ಸಾಧನೆಯ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.