ಮುಂಬೈ (ಪಿಟಿಐ): ಪ್ರಸಕ್ತ ಸಾಲಿನಲ್ಲಿ ಬಜೆಟ್ನಲ್ಲಿ ಬ್ರಾಂಡೆಡ್ ಸಿದ್ಧ ಉಡುಪುಗಳ ಮೇಲೆ ಹೇರಲಾಗಿರುವ ಶೇ 10ರಷ್ಟು ಅಬಕಾರಿ ತೆರಿಗೆಯನ್ನು ಸರ್ಕಾರ ಮರು ಪರಿಶೀಲಿಸಲಿದೆ ಹಾಗೂ ಕೆಲವು ಸಮತೋಲಿತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಲ್ಲಿ ನಡೆದ ಜವಳಿ ಉದ್ಯಮ ಮೇಳದಲ್ಲಿ ಈ ಭರವಸೆ ನೀಡಿದ ಜವಳಿ ಆಯುಕ್ತ ಎ.ಬಿ ಜೋಶಿ, ಸರ್ಕಾರ ತೆರಿಗೆ ದರ ಇಳಿಸುವ ಭರವಸೆ ವ್ಯಕ್ತಪಡಿಸಿದೆ. ಭವಿಷ್ಯದಲ್ಲಿ ಉದ್ಯಮಕ್ಕೆ ನೆರವಾಗುವಂತ ಸಮತೋಲನದ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು. ಉತ್ಪಾದನಾ ವೆಚ್ಚ ಹೆಚ್ಚಳದಿಂದ ಈಗಾಗಲೇ ಜವಳಿ ಉದ್ಯಮ ತೀವ್ರ ಸಮಸ್ಯೆ ಎದುರಿಸುತ್ತಿದೆ. ಜತೆಗೆ ತೆರಿಗೆ ಹೆಚ್ಚಿಸಿರುವುದು ಒಟ್ಟಾರೆ ವಹಿವಾಟಿನ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆರೋಪಿಸಿ, ಸಿದ್ಧ ಉಡುಪು ತಯಾರಿಕಾ ಸಂಸ್ಥೆಗಳು ಎರಡು ದಿನಗಳ ಕಾಲ ದೇಶವ್ಯಾಪಿ ಮುಷ್ಕರ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.