ಕೋಯಿಕ್ಕೋಡ್ (ಪಿಟಿಐ): ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಇದೇ 31ರಂದು ಮೊದಲ ತ್ರೈಮಾಸಿಕ ಹಣಕಾಸು ಪರಾಮರ್ಶೆ ಪ್ರಕಟಿಸಲಿದೆ.

`ಹಣದುಬ್ಬರ ಏರಿಕೆ ತಡೆಯುವುದು `ಆರ್‌ಬಿಐ~ನ ಮೊದಲ ಆದ್ಯತೆ. ಇದಕ್ಕಾಗಿ ಆರ್ಥಿಕ ಪ್ರಗತಿಯನ್ನು ಸ್ವಲ್ಪ ಮಟ್ಟಿಗೆ ತ್ಯಾಗ ಮಾಡಬೇಕಾಗುತ್ತದೆ. ಬೆಲೆ ಏರಿಕೆ ಬಿಸಿಯು ಶ್ರೀಮಂತರಿಗಿಂತ ಹೆಚ್ಚಾಗಿ ಬಡವರನ್ನು ತಟ್ಟಿದೆ~ ಎಂದು `ಆರ್‌ಬಿಐ~ ಗವರ್ನರ್ ಡಿ.ಸುಬ್ಬರಾವ್ ತಿಳಿಸಿದ್ದಾರೆ.

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಇಲ್ಲಿ ಶನಿವಾರ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿದ ಹಿನ್ನೆಲೆಯಲ್ಲಿ ಪೆಟ್ರೋಲ್ ದರ ತಗ್ಗಿಸಲಾಗಿದೆ. ಈ ರೀತಿ ಆದ್ಯತೆ ಮೇರೆಗೆ ಬೆಲೆ ಏರಿಕೆ ನಿಯಂತ್ರಿಸಲಾಗುವುದು ಎಂದು ಅವರು ಹೇಳಿದರು.

ಹಣದುಬ್ಬರ ತಗ್ಗದ ಹಿನ್ನೆಲೆಯಲ್ಲಿ `ಆರ್‌ಬಿಐ~ ಜೂನ್ 18ರಂದು ಪ್ರಕಟಿಸಿದ ತ್ರೈಮಾಸಿಕ ಹಣಕಾಸು ನೀತಿಯಲ್ಲಿ `ರೆಪೊ~ ಮತ್ತು ರಿವರ್ಸ್ ರೆಪೊ ದರದಲ್ಲಿ ಯಾವುದೇ ವ್ಯತ್ಯಾಸ ತಾರದೆ ಯಥಾಸ್ಥಿತಿ ಕಾಯ್ದುಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.