ಭಾನುವಾರ, ಸೆಪ್ಟೆಂಬರ್ 19, 2021
30 °C

ಗ್ರಾ.ಪಂ. ಖಾಲಿ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಗ್ರಾಮ ಪಂಚಾಯ್ತಿಯ ಸದಸ್ಯ ಸ್ಥಾನಗಳನ್ನು ತುಂಬಲು, ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಉಪ ಚುನಾವಣೆ ಅಧಿಸೂಚನೆಯನ್ನು ಹೊರಡಿಸಿ ವೇಳಾಪಟ್ಟಿ ನಿಗದಿಪಡಿಸಿದ್ದಾರೆ.

ಮೇ 13ರಂದು ಚುನಾವಣಾ ಅಧಿಸೂಚನೆ ಹೊರಡಿಸುವುದು. ಮೇ 16 ನಾಮಪತ್ರಗಳನ್ನು ಸಲ್ಲಿಸಲು ಕೊನೆ ದಿನ. 17 ನಾಮಪತ್ರಗಳನ್ನು ಪರಿಶೀಲಿಸುವ ದಿನ, 20 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆ ದಿನ.

29ರಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ. 30ರಂದು ಅವಶ್ಯವಿದ್ದರೆ, ಮರು ಮತದಾನ ಬೆಳಿಗ್ಗೆ 7ರಿಂದ ಸಂಜೆ 5ಗಂಟೆವರೆಗೆ. 31ರಂದು ಮತಗಳ ಎಣಿಕೆ, ಫಲಿತಾಂಶ ಪ್ರಕಟ ಎಂದು ತಿಳಿಸಿದ್ದಾರೆ.

ಚುನಾವಣೆ ನಡೆಯುವ ಗ್ರಾ.ಪಂ. ಕ್ಷೇತ್ರ (ಮೀಸಲಾತಿ) ವಿವರ: ವಿಜಯಪುರ ತಾಲ್ಲೂಕಿನ ನಾಗಠಾಣ (ಸಾಮಾನ್ಯ), ತಿಕೋಟಾ ತಾಲ್ಲೂಕಿನ ತಿಕೋಟಾ (ಸಾಮಾನ್ಯ), ತೊರವಿ (ಸಾಮಾನ್ಯ), ಬಸವನಬಾಗೇವಾಡಿ ತಾಲ್ಲೂಕಿನ ಹೆಬ್ಬಾಳ (ಸಾಮಾನ್ಯ), ಮುದ್ದೇಬಿಹಾಳ ತಾಲ್ಲೂಕಿನ ಬೊಮ್ಮನಹಳ್ಳಿ (ಸಾಮಾನ್ಯ- ಮಹಿಳೆ), ರೂಡಗಿ (ಸಾಮಾನ್ಯ), ಇಂಡಿ ತಾಲ್ಲೂಕಿನ ಧೂಳಖೇಡ (ಅನುಸೂಚಿತ ಜಾತಿ ಮಹಿಳೆ) ಹಾಗೂ ದೇವರ ಹಿಪ್ಪರಗಿ ತಾಲ್ಲೂಕಿನ ಯಲಗೋಡ (ಅನುಸೂಚಿತ ಪಂಗಡ-ಮಹಿಳೆ)

ಮದ್ಯ ಮಾರಾಟ ನಿಷೇಧ:

ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳನ್ನು ತುಂಬಲು ಮೇ 29ರಂದು ಮತದಾನ ನಡೆಯಲಿದ್ದು, ಶಾಂತಿ ಸುವ್ಯವಸ್ಥೆ ಹಾಗೂ ಸುಗಮ ಮತದಾನಕ್ಕಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಚುನಾವಣೆ ನಡೆಯುವ ಕ್ಷೇತ್ರದ ವ್ಯಾಪ್ತಿಯಲ್ಲಿ ಮೇ 31ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳಲ್ಲಿರುವ ಎಲ್ಲ ಮದ್ಯದ ಅಂಗಡಿಗಳನ್ನು ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಮುಚ್ಚಬೇಕು ಹಾಗೂ ಮೊಹರು ಮಾಡಿದ ಅದರ ಕೀಯನ್ನು ತಾಲ್ಲೂಕು ಮ್ಯಾಜಿಸ್ಟ್ರೇಟರಿಗೆ ಒಪ್ಪಿಸಬೇಕು ಎಂದು ಅವರು ಆದೇಶಿಸಿದ್ದಾರೆ.

ಯಾವುದೇ ಕ್ಷೇತ್ರಕ್ಕೆ ಅವಿರೋಧವಾದಲ್ಲಿ ಸದರಿ ಕ್ಷೇತ್ರದಲ್ಲಿ ತಕ್ಷಣದಿಂದ ನೀತಿ ಸಂಹಿತೆ ನಿಂತು ಹೋಗುತ್ತದೆ ಬಾಕಿ ಉಳಿದ ಕ್ಷೇತ್ರಗಳಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು