ಬರ: ಸಚಿವ ಸಂಪುಟ ಉಪಸಮಿತಿ ಭೇಟಿ ಇಂದು

7

ಬರ: ಸಚಿವ ಸಂಪುಟ ಉಪಸಮಿತಿ ಭೇಟಿ ಇಂದು

Published:
Updated:

ಚಾಮರಾಜನಗರ: ರಾಜ್ಯದ ಪ್ರವಾಹ ಪೀಡಿತ ಹಾಗೂ ಬರಪೀಡಿತ ಪ್ರದೇಶಗಳ ಅಧ್ಯಯನ ಹಾಗೂ ಬರನಿರ್ವಹಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಗಾಗಿ ರಚಿಸಲಾಗಿರುವ ಮೈಸೂರು ಕಂದಾಯ ವಿಭಾಗದ ಸಚಿವ ಸಂಪುಟ ಉಪಸಮಿತಿ ಶುಕ್ರವಾರ ಚಾಮರಾಜನಗರ ಜಿಲ್ಲೆಯ ಬರಪೀಡಿತ ಪ್ರದೇಶಗಳ ಕ್ಷೇತ್ರಗಳಿಗೆ ಭೇಟಿ ನೀಡಲಿದೆ. 

ಸಚಿವ ಸಂಪುಟ ಉಪಸಮಿತಿಯ ಅಧ್ಯಕ್ಷರಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ನೇತೃತ್ವದಲ್ಲಿ ಬರಪೀಡಿತ ಪ್ರದೇಶಗಳ ಕ್ಷೇತ್ರ ಪರಿಶೀಲನೆ ನಡೆಯಲಿದೆ.

ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ಬರಪೀಡಿತ ಪ್ರದೇಶಗಳ ಕ್ಷೇತ್ರ ಪರಿಶೀಲನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ತಂಡವು ಬೆಳಿಗ್ಗೆ 10 ಗಂಟೆಗೆ ಚಾಮರಾಜನಗರ ತಾಲ್ಲೂಕಿನ ಯಡಪುರಕ್ಕೆ ಆಗಮಿಸಿ ಪರಿಶೀಲಿಸಲಿದೆ. 11 ಗಂಟೆಗೆ ಗುಂಡ್ಲುಪೇಟೆ ತಾಲ್ಲೂಕು ತೆರಕಣಾಂಬಿಗೆ ತಂಡ ಭೇಟಿ ನೀಡಲಿದೆ. ಮಧ್ಯಾಹ್ನ 12.15ಕ್ಕೆ ಅಣ್ಣೂರು, 1.15ಕ್ಕೆ ಗುಂಡ್ಲುಪೇಟೆ, 2.15ಕ್ಕೆ ಹಸಗೂಲಿಗೆ ಭೇಟಿ ನೀಡಲಿದೆ. ಮಧ್ಯಾಹ್ನ 3 ಗಂಟೆಗೆ ಮೈಸೂರಿಗೆ ತೆರಳಿ, ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬರ ಅಧ್ಯಯನ ತಂಡದೊಂದಿಗೆ ಎಲ್ಲ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !