ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಕಾಲುವೆಗೆ ಬಿದ್ದು ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲ್ಹಾರ: ಮದ್ಯದ ಅಮಲಿನಲ್ಲಿ ಈಜಲು ಹೋದ ವ್ಯಕ್ತಿಯೊಬ್ಬ, ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ತಾಲ್ಲೂಕಿನ ಮಸೂತಿ ಗ್ರಾಮದ ಬಳಿಯ ಕಾಲುವೆಯಲ್ಲಿ ನಡೆದಿದೆ.

ಮಸೂತಿ ಗ್ರಾಮದ ಭೀಮಶಿ ರಾಮಪ್ಪ ಬೀಳಗಿ (55) ಮೃತಪಟ್ಟ ವ್ಯಕ್ತಿ.

ಭೀಮಶಿ ಸೋಮವಾರ ಸಂಜೆ 4ರ ವೇಳೆಗೆ, ಕುಡಿದ ಅಮಲಿನಲ್ಲಿ ಮೂವರು ಸ್ನೇಹಿತರೊಂದಿಗೆ ಕಾಲುವೆಯಲ್ಲಿ ಈಜಲು ಹೋಗಿದ್ದರು. ಕಾಲು ಜಾರಿ ತಲೆಗೆ ಬಲವಾದ ಪೆಟ್ಟು ಬಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ಶಂಕಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಮೃತನ ದೇಹ ಪತ್ತೆಯಾಗಿದೆ ಎಂದು ಕೂಡಗಿ ಎನ್‌ಟಿಪಿಸಿ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.