ಶುಕ್ರವಾರ, ನವೆಂಬರ್ 15, 2019
21 °C

ಕೆನರಾ ಬ್ಯಾಂಕ್‌ನ ರಾಷ್ಟ್ರಮಟ್ಟದ ರಸಪ್ರಶ್ನೆ ಕಾರ್ಯಕ್ರಮ 21ರಂದು

Published:
Updated:

ಬೆಂಗಳೂರು: ಕೆನರಾ ಬ್ಯಾಂಕ್‌ನ ರಾಷ್ಟ್ರ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ‘ಕೆನರಾ ನಾಲೆಡ್ಜ್ ಚಾಂಪ್–2019’ ಇದೇ 21ರಂದು ಸೆಂಟ್ರಲ್‌ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ.

ನಗರದ ಸುತ್ತಮುತ್ತಲ ಶಾಲೆಗಳ 8ರಿಂದ 11ನೇ ತರಗತಿವರೆಗಿನ ವಿದ್ಯಾರ್ಥಿಗಳು ಭಾಗವಹಿಸಬಹುದು. ಪ್ರತಿ ಶಾಲೆಯಿಂದ ತಲಾ ಇಬ್ಬರು ವಿದ್ಯಾರ್ಥಿಗಳನ್ನು ಒಳಗೊಂಡ ಗರಿಷ್ಠ ಎರಡು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ವಿಜೇತರಿಗೆ ಪ್ರಥಮ ಬಹುಮಾನವಾಗಿ ₹50 ಸಾವಿರ, ದ್ವಿತೀಯ ಬಹುಮಾನ ₹30 ಸಾವಿರ ಮತ್ತು ಮೂರನೇ ಬಹುಮಾನ ₹20 ಸಾವಿರ ನೀಡಲಾಗುವುದು.

ಆಸಕ್ತ ವಿದ್ಯಾರ್ಥಿಗಳು ಶಾಲೆಗಳ ಮೂಲಕ ಕೆನರಾ ಬ್ಯಾಂಕ್‌ನ ಸ್ಥಳೀಯ ಶಾಖೆಗಳಲ್ಲಿ ಜು. 17ರ ಸಂಜೆ 5 ಗಂಟೆ ತನಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080–22273275, 91-9630041234 ಸಂಪರ್ಕಿಸಬಹುದು ಎಂದು ಬ್ಯಾಂಕ್ ತಿಳಿಸಿದೆ.

ಪ್ರತಿಕ್ರಿಯಿಸಿ (+)