ಕಾರು ಉರುಳಿ ವ್ಯಕ್ತಿ ಸಾವು

4

ಕಾರು ಉರುಳಿ ವ್ಯಕ್ತಿ ಸಾವು

Published:
Updated:
Deccan Herald

ಮದ್ದೂರ (ಮಂಡ್ಯ ಜಿಲ್ಲೆ): ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ತಡೆಗೋಡೆಗೆ ಡಿಕ್ಕಿ ಹೊಡೆದು ಉರುಳಿದ ಪರಿಣಾಮ ಬೆಂಗಳೂರಿನ ಮಲ್ಲೇಶ್ವರಂ ನಿವಾಸಿ ಉಮೇಶ್ (50) ಶನಿವಾರ ತಡ ರಾತ್ರಿ ಮೃತಪಟ್ಟಿದ್ದಾರೆ.

ಚಾಲಕ ಮೋಹನಕುಮಾರ್ ಸೇರಿದಂತೆ ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದೆ.

ಉಮೇಶ್‌ ಅವರು ತಮ್ಮ ಗೆಳೆಯರೊಂದಿಗೆ ಶನಿವಾರ ಆಮಾವಾಸ್ಯೆಯ ವಿಶೇಷ ಪೂಜೆಗಾಗಿ ಮಹದೇಶ್ವರ ಬೆಟ್ಟಕ್ಕೆ ಹೋಗಿ ಹಿಂದಿರುಗುತ್ತಿದ್ದರು. ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !