ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾರ್ಮಿಕರ ಸಮಸ್ಯೆಗಳು ಚರ್ಚಾ ವಿಷಯಗಳಾಗಲಿ’ : ವರಲಕ್ಷ್ಮಿ

Last Updated 16 ಮಾರ್ಚ್ 2018, 19:35 IST
ಅಕ್ಷರ ಗಾತ್ರ

ಬೆಂಗಳೂರು: 'ರಾಜ್ಯದ ಏಳಿಗೆಗಾಗಿ ದುಡಿಯುತ್ತಿರುವ ಶ್ರಮಜೀವಿಗಳ ಸಮಸ್ಯೆಗಳು ರಾಜಕೀಯ ಚರ್ಚಾ ವಿಷಯಗಳಾಗಬೇಕು' ಎಂದು ಸಿಐಟಿಯು ಅಧ್ಯಕ್ಷೆ ವರಲಕ್ಷ್ಮಿ ಹೇಳಿದರು.

ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ನವಕರ್ನಾಟಕ ನಿರ್ಮಾಣಕ್ಕಾಗಿ ಕಾರ್ಮಿಕರ ಪ್ರಣಾಳಿಕೆ–2018 ಅನ್ನು ಬಿಡುಗಡೆ ಮಾಡಿ ಮಾತನಾಡಿದರು.

‘ಪ್ರಣಾಳಿಕೆಯಲ್ಲಿರುವ ಅಂಶಗಳನ್ನು ಚುನಾವಣೆಯ ಭಾಗವಾಗಿ ಮಾಡಬೇಕು ಹಾಗೂ ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಒಂದು ದೇಶ ಒಂದು ತೆರಿಗೆ ಮಾದರಿಯಲ್ಲೇ ‘ಒಂದು ದೇಶ ಒಂದೇ ರೀತಿಯ ಕನಿಷ್ಠ ವೇತನ’ ವ್ಯವಸ್ಥೆ ಜಾರಿಗೆ ತರಬೇಕು’ ಎಂದರು.

ಪ್ರಣಾಳಿಕೆಯ ಪ್ರಮುಖ ಅಂಶಗಳು:
* ಕಾರ್ಮಿಕರಿಗೆ ತಿಂಗಳಿಗೆ ₹18 ಸಾವಿರ ಕನಿಷ್ಠ ವೇತನ ನೀಡಬೇಕು
* ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು
* ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವವರನ್ನು ‍ಕಾಯಂ ಮಾಡಬೇಕು
* ಎಲ್ಲಾ ಜಿಲ್ಲೆಗಳಲ್ಲಿಯೂ ಕಾರ್ಮಿಕ ನ್ಯಾಯಾಲಯ ಸ್ಥಾಪಿಸಬೇಕು
* ಕಾರ್ಮಿಕ ಕಾನೂನುಗಳ ಕಟ್ಟುನಿಟ್ಟಿನ ಜಾರಿ
* ವಸತಿಹೀನ ಸಂಘಟಿತ ಅಥವಾ ಅಸಂಘಟಿಕ ಕಾರ್ಮಿಕರಿಗೆ ವಸತಿ ಸೌಲಭ್ಯ
* ಕೈಗಾರಿಕಾ ಕಾರ್ಮಿಕರ ನಿವೃತ್ತಿ ವಯಸ್ಸನ್ನು 60ಕ್ಕೆ ಏರಿಸಬೇಕು
* ನಿರುದ್ಯೋಗ ನಿವಾರಣೆಗೆ ಉದ್ಯೋಗ ಸೃಷ್ಟಿ
* ಬೆಲೆ ಏರಿಕೆ ನಿಯಂತ್ರಣ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT