ಅಮ್ನೆಸ್ಟಿ ವಿರುದ್ಧದ ಪ್ರಕರಣ ಮುಕ್ತಾಯ

7

ಅಮ್ನೆಸ್ಟಿ ವಿರುದ್ಧದ ಪ್ರಕರಣ ಮುಕ್ತಾಯ

Published:
Updated:

ಬೆಂಗಳೂರು: ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ್ದ ಆರೋಪದಡಿ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನಗರದ 8ನೇ ಎಸಿಎಂಎಂ ನ್ಯಾಯಾಲಯವು ಮುಕ್ತಾಯಗೊಳಿಸಿದೆ.

2016ರ ಆಗಸ್ಟ್ 13ರಂದು ಸಂಸ್ಥೆಯು ‘ಕಾಶ್ಮೀರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು’ ಕುರಿತು ಕಾರ್ಯಕ್ರಮ ಏರ್ಪಡಿಸಿತ್ತು. ಅಲ್ಲಿಯೇ ಕೆಲವರು ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಜೆ.ಸಿ.ನಗರ ಪೊಲೀಸರು, ‘ಘೋಷಣೆ ಕೂಗಿದ್ದಕ್ಕೆ ಯಾವುದೇ ಪುರಾವೆಗಳು ಇಲ್ಲ’ ಎಂದು ಹೇಳಿ ನ್ಯಾಯಾಲಯಕ್ಕೆ ‘ಬಿ ರಿಪೋರ್ಟ್’ ಸಲ್ಲಿಸಿದ್ದರು.

ಅದನ್ನು ಆಧರಿಸಿ ನ್ಯಾಯಾಲಯ, ಆಕ್ಷೇಪಣೆ ಸಲ್ಲಿಸಲು ದೂರುದಾರರಿಗೆ ನೋಟಿಸ್‌ ಜಾರಿ ಮಾಡಿದ್ದರು. ದೂರುದಾರರು ವಿಚಾರಣೆಗೆ ನಿರಂತರವಾಗಿ ಗೈರಾಗಿದ್ದರಿಂದ ಪ್ರಕರಣವನ್ನು ಅಂತ್ಯಗೊಳಿಸಿ ಗುರುವಾರ ಆದೇಶ ಹೊರಡಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !