ಶಾಲಾ-ಕಾಲೇಜುಗಳಲ್ಲಿ ಆಪ್ತ ಸಲಹಾ ಕೇಂದ್ರ

7

ಶಾಲಾ-ಕಾಲೇಜುಗಳಲ್ಲಿ ಆಪ್ತ ಸಲಹಾ ಕೇಂದ್ರ

Published:
Updated:

ಚಿತ್ರದುರ್ಗ: ಶಾಲಾ -ಕಾಲೇಜುಗಳಲ್ಲಿ ಆಪ್ತ ಸಲಹಾ ಕೇಂದ್ರ ತೆರೆಯುವ ಅಗತ್ಯವಿದೆ ಎಂದು ದಾವಣಗೆರೆ ಎವಿಕೆ ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಪಾಲಾಕ್ಷ ಅಭಿಪ್ರಾಯಪಟ್ಟರು.ನಗರದ ಮಹಾರಾಜ ಮದಕರಿ ನಾಯಕ ಪ್ರಥಮದರ್ಜೆ ಕಾಲೇಜಿನ ಮನಃಶಾಸ್ತ್ರ ವಿಭಾಗ ಹಾಗೂ ಮನೋವೈಜ್ಞಾನಿಕ ಚಿಕಿತ್ಸಾ ಸಲಹಾ ಮತ್ತು ಮಾರ್ಗದರ್ಶನ ಕೇಂದ್ರದ ಆಶ್ರಯದಲ್ಲಿ ಮಂಗಳವಾರ ಕಾಲೇಜಿನಲ್ಲಿ ಆಯೋಜಿಸಿದ್ದ `ಮಕ್ಕಳು ಮತ್ತು ಯುವ ಜನರ ವರ್ತನೆ~ ಕುರಿತ ಸಮಸ್ಯೆಗಳಿಗಾಗಿ ಮನೋವೈಜ್ಞಾನಿಕ ಸಲಹೆ~ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶಾಲಾ- ಕಾಲೇಜಿನ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಮಾನಸಿಕ ಸಮಸ್ಯೆಗಳಿರುತ್ತವೆ. ಈ ಸಂದರ್ಭದಲ್ಲಿ ಅವರೊಂದಿಗೆ ಆಪ್ತ ಸಮಾಲೋಚನೆ ನಡೆಸಿ ಸೂಕ್ತಸಲಹೆ ಮಾರ್ಗಗಳನ್ನು ನೀಡುವುದರಿಂದ ವಿದ್ಯಾರ್ಥಿಗಳು ಮಾನಸಿಕ ತೊಳಲಾಟದಿಂದ ಹೊರಬರಲು ಸಾಧ್ಯವಾಗಲಿದೆ. ಆಪ್ತ ಸಲಹಾ ಕೇಂದ್ರಗಳಲ್ಲಿ ಕೌನ್ಸೆಲಿಂಗ್ ನಡೆಸುವವರು ಮಾನಸಿಕ ರೋಗಿಗಳ ಸಮಸ್ಯೆಗಳನ್ನು ಗೌಪ್ಯವಾಗಿಡಬೇಕು ಎಂದು ಸಲಹೆ ನೀಡಿದರು.ಬಸವೇಶ್ವರ ಮೆಡಿಕಲ್ ಕಾಲೇಜಿನ ಸಲಹಾ ಮನೋಚಿಕಿತ್ಸಕ ಬಿಂದು ಮಾಧವ ಮಾತನಾಡಿ, 21ನೇ ಶತಮಾನವನ್ನು `ಉದ್ವಿಗ್ನ ಯುಗ~ ಎಂದು ಕರೆಯಬಹುದಾಗಿದೆ. ಏಕೆಂದರೆ, ಪ್ರತಿಯೊಬ್ಬರು ಒಂದ್ಲ್ಲಿಲೊಂದು ಒತ್ತಡಗಳಿಗೆ ಸಿಲುಕಿ ಮಾನಸಿಕ ಖಿನ್ನತೆಯನ್ನು ಅನುಭವಿಸುತ್ತಿದ್ದಾರೆ. ಗಾಬರಿ, ಅತಂಕ, ದುಶ್ಚಟ ಸೇರಿದಂತೆ ಇತರೆ ಸಮಸ್ಯೆಗಳಿಂದ ದೈನಂದಿನ ಬದುಕಿನಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿರುವವರು ನಿರ್ಭಯವಾಗಿ ಆಪ್ತ ಸಮಾಲೋಚನೆ ನಡೆಸುವ ಮೂಲಕ ಪರಿಹಾರ ಕಂಡು ಕೊಳ್ಳಬಹುದು ಹಾಗೂ ಚಿಕಿತ್ಸೆ ಪಡೆಯುವುದರಿಂದ ಸಮಸ್ಯೆ ನಿವಾರಿಸಿಕೊಳ್ಳಬಹುದು ಎಂದರು.ಮಹಾರಾಜ ಮದಕರಿ ನಾಯಕ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎ. ಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.ಮನಃಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಎಸ್.ಎಂ. ಗುರುಮೂರ್ತಿ ಪ್ರಾಸ್ತಾವಿಕ ಮಾತನಾಡಿದರು.

ಎಸ್.ಪಿ. ರಾಜೇಶ್ವರಿ ಪ್ರಾರ್ಥಿಸಿದರು. ಎ.ವಿ. ನುಂಕಪ್ಪ ಕಾರ್ಯಕ್ರಮ ನಿರೂಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry