ರಾಜ್ಯ ಸರ್ಕಾರಕ್ಕೆ ಕೇಂದ್ರ ಸಹಕರಿಸುತ್ತಿಲ್ಲ: ಸಿದ್ದರಾಮಯ್ಯ ಆರೋಪ

7

ರಾಜ್ಯ ಸರ್ಕಾರಕ್ಕೆ ಕೇಂದ್ರ ಸಹಕರಿಸುತ್ತಿಲ್ಲ: ಸಿದ್ದರಾಮಯ್ಯ ಆರೋಪ

Published:
Updated:
Prajavani

ಚಿಕ್ಕಬಳ್ಳಾಪುರ: ‘ಕೇಂದ್ರ ಸರ್ಕಾರ ಬರಗಾಲದ ಸಂದರ್ಭದಲ್ಲಿ ರಾಜ್ಯ ಸರ್ಕಾರದೊಂದಿಗೆ ಸಹಕಾರ ನೀಡುವುದಿಲ್ಲ. ಬಜೆಟ್‌ನಲ್ಲಿ ಹೇಳಿರುವ ಅನುದಾನವನ್ನು ಬಿಡುಗಡೆ ಮಾಡುವುದಿಲ್ಲ. ರಾಜ್ಯ ಸರ್ಕಾರದ ಯೋಜನೆಗಳಿಗೆ ಕೊಕ್ಕೆ ಹಾಕುವುದೇ ಕೇಂದ್ರದ ಕೆಲಸ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಆರೋಪಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದ್ಯ ರಾಜ್ಯದಲ್ಲಿ ಬರಗಾಲವಿದೆ. ಆದ್ದರಿಂದ ಬಡವರಿಗೆ ಕೂಲಿ ಕೊಡುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಅನುದಾನವನ್ನು ಕೇಂದ್ರ ಸರ್ಕಾರ ಮುಂಚಿತವಾಗಿಯೇ ಬಿಡುಗಡೆ ಮಾಡಬೇಕಿತ್ತು. ಸಮಯಕ್ಕೆ ಸರಿಯಾಗಿ ಅನುದಾನ ಬಿಡುಗಡೆ ಮಾಡುವುದಿಲ್ಲ. ಒಮ್ಮೊಮ್ಮೆ ಹಂಚಿಕೆ ಮಾಡಿರುವಷ್ಟನ್ನೂ ಕೊಡುವುದಿಲ್ಲ’ ಎಂದು ಹೇಳಿದರು.

‘ಸಮ್ಮಿಶ್ರ ಸರ್ಕಾರದಲ್ಲಿ ಯಾರನ್ನು ಯಾರೂ ಕಡೆಗಣಿಸುತ್ತಿಲ್ಲ. ಬಿಜೆಪಿಯವರು ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಲೇ ಇದ್ದಾರೆ. ನಾವು ಉತ್ತಮ ಆಡಳಿತ ನಡೆಸುತ್ತಲೇ ಇದ್ದೇವೆ. ಬಿಜೆಪಿಯವರ ಕನಸುಗಳು ನನಸಾಗುವುದಿಲ್ಲ. ಅವು ಭ್ರಮೆಗಳಾಗಿ ಉಳಿಯುತ್ತವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಪ್ರಿಯಾಂಕಾ ಗಾಂಧಿ ವಾದ್ರಾ ರಾಜಕೀಯ ಪ್ರವೇಶವನ್ನು ನಾನು ಸ್ವಾಗತಿಸುತ್ತೇನೆ. ಇದು ಪಕ್ಷದ ಕಾರ್ಯಕರ್ತರ ಬಹುದಿನದ ಕನಸಾಗಿತ್ತು. ರಾಹುಲ್‌ ಗಾಂಧಿ ಅವರು ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ಉತ್ತರ ಪ್ರದೇಶದಲ್ಲಿ ರಾಜಕೀಯ ಬದಲಾವಣೆ ನಿಶ್ಚಿತವಾಗಿ ಆಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 7

  Happy
 • 2

  Amused
 • 1

  Sad
 • 1

  Frustrated
 • 5

  Angry

Comments:

0 comments

Write the first review for this !