ಕಾಶ್ಮೀರವನ್ನು ಶಾಂತಿಯ ತವರೂರಾಗಿ ಮಾಡುವುದು ನಮ್ಮ ಗುರಿ: ರಾಜನಾಥ್ ಸಿಂಗ್

7
ಭಯೋತ್ಪಾದನೆ ಅಂತ್ಯದ ಗುರಿ

ಕಾಶ್ಮೀರವನ್ನು ಶಾಂತಿಯ ತವರೂರಾಗಿ ಮಾಡುವುದು ನಮ್ಮ ಗುರಿ: ರಾಜನಾಥ್ ಸಿಂಗ್

Published:
Updated:
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್

ಲಖನೌ: ಭಯೋತ್ಪಾದನೆಯನ್ನು ಅಂತ್ಯಗೊಳಿಸಿ ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಕಾಶ್ಮೀರದಲ್ಲಿನ ಮೂರು ವರ್ಷಗಳ ಬಿಜೆಪಿ–ಪಿಡಿಪಿ ಮೈತ್ರಿ ಮುರಿದು ಬಿದ್ದ ಬೆನ್ನಲ್ಲೇ ಈ ಹೇಳಿಕೆ ನೀಡಿದ್ದಾರೆ. 

ಉಗ್ರ ಚಟುವಟಿಕೆಗಳನ್ನು ಕೊನೆಗೊಳಿಸಿ ಜಮ್ಮು ಕಾಶ್ಮೀರವನ್ನು ಶಾಂತಿಯ ತವರೂರಾಗಿ ಮಾಡುವುದು ನಮ್ಮ ಗುರಿಯಾಗಿದೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲು ಆಲೋಚಿಸಿದೆ ಎಂದು ತಿಳಿಸಿದ್ದಾರೆ.

ಮಂಗಳವಾರ ಬಿಜೆಪಿ–ಪಿಡಿಪಿ ಮೈತ್ರಿ ಮುರಿದು ಬಿದ್ದಿತ್ತು ಹಾಗೂ ಮೆಹಬೂಬ್ ಮುಫ್ತಿ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !