ಸೋಮವಾರ, ಜೂನ್ 14, 2021
26 °C

ಸಾಮಾನ್ಯ ಪರೀಕ್ಷೆ ಕಾರ್ಯ ಸಮರ್ಪಕ ನಿರ್ವಹಣೆಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ 2019) ಪ್ರಕ್ರಿಯೆಯನ್ನು ಯಾವುದೇ ಲೋಪವಿಲ್ಲದೆ ಸಮರ್ಪಕವಾಗಿ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಾಮಾನ್ಯ ಪ್ರವೇಶ ಪರೀಕ್ಷೆ ಸಿದ್ಧತಾ ಕುರಿತ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಏಪ್ರಿಲ್‌ 29 ಮತ್ತು 30ರಂದು ನಡೆಯುವ ಸಿಇಟಿ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು. ಈಗಾಗಲೇ ನೇಮಕವಾಗಿರುವ ಅಧಿಕಾರಿಗಳು, ಪರೀಕ್ಷಾ ವೀಕ್ಷಕರು, ಮೂವರು ಸದಸ್ಯ ಸಮಿತಿ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ವಿಶೇಷ ಜಾಗೃತ ದಳದ ಸದಸ್ಯರು ಇತರರು ನಿಯಮಾನುಸಾರವಾಗಿ ಪಾಲಿಸಬೇಕಿರುವ ಸೂಚನೆಗಳನ್ನು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

ಪರೀಕ್ಷಾ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಎಚ್ಚರಿಕೆ ವಹಿಸಿ ಕಾರ್ಯನಿರ್ವಹಿಸಬೇಕು. ಎಂದಿನಂತೆ ಸಿಇಟಿ ಪರೀಕ್ಷೆಯು ಯಶಸ್ವಿಯಾಗಿ, ದೋಷರಹಿತವಾಗಿ ನಡೆಯಬೇಕು. ಪರೀಕ್ಷಾ ಸಮಯದಲ್ಲಿ ಅಳವಡಿಸಿರುವ ಎಲ್ಲ ನಿಯಮಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ವಿ.ಆರ್.ಶ್ಯಾಮಲಾ ಮಾತನಾಡಿ, ‘ಚಾಮರಾಜನಗರದ ಜೆ.ಎಸ್.ಎಸ್. ಮಹಿಳಾ ಕಾಲೇಜಿನಿಂದ 391 ವಿದ್ಯಾರ್ಥಿಗಳು, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಿಂದ 260 ವಿದ್ಯಾರ್ಥಿಗಳು, ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಎಸ್.ವಿ.ಕೆ ಬಾಲಕಿಯರ ಪದವಿಪೂರ್ವ ಕಾಲೇಜಿನಿಂದ 344 ವಿದ್ಯಾರ್ಥಿಗಳು ಹಾಗೂ ನಿಸರ್ಗ ಸ್ವತಂತ್ರ ಪದವಿಪೂರ್ವ ಕಾಲೇಜಿನಿಂದ 320 ವಿದ್ಯಾರ್ಥಿಗಳು ಸೇರಿ ಒಟ್ಟು 1,315 ವಿದ್ಯಾರ್ಥಿಗಳು ಈ ಬಾರಿ ಸಾಮಾನ್ಯ ಸಿಇಟಿ ಬರೆಯಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಮೌನಾಚರಣೆ: ಸಭೆಗೂ ಮುನ್ನ ಮತದಾನದ ದಿನದಂದು ಕರ್ತವ್ಯ ನಿರ್ವಹಣೆ ವೇಳೆ ಮೃತಪಟ್ಟ ಹನೂರು ಕಾಲೇಜಿನ ಉಪನ್ಯಾಸಕ ಶಾಂತಮೂರ್ತಿ ಅವರ ಗೌರವಾರ್ಥ ಎರಡು ನಿಮಿಷಗಳ ಕಾಲ ಮೌನ ಆಚರಿಸುವ ಮೂಲಕ ಸಂತಾಪ ಸೂಚಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಮಂಜುಳಾ, ಕೊಳ್ಳೇಗಾಲ ತಾಲ್ಲೂಕಿನ ತಹಶೀಲ್ದಾರ್ ಆನಂದಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್‌ ಇದ್ದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು