ಬುಧವಾರ, ಏಪ್ರಿಲ್ 21, 2021
25 °C
ವಾಯುವಿಹಾರಕ್ಕೆ ಹೋದಾಗ ನಡೆದ ಘಟನೆ

ಚಾಕು ತೋರಿಸಿ ಚಿನ್ನದ ಸರ ಕಿತ್ತು ಪರಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಳ್ಳೇಗಾಲ: ತಾಲ್ಲೂಕಿನ ಸಿಲ್ಕಲ್‍ಪುರ ಗ್ರಾಮದ ಬೆಳಿಗ್ಗೆ ವಾಯುವಿಹಾರ ಮಾಡುತ್ತಿದ್ದಾಗ ಗೃಹಿಣಿಯನ್ನು ಅಡ್ಡಗಟ್ಟಿದ ಇಬ್ಬರು ವ್ಯಕ್ತಿಗಳು ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ದೋಚಿ ಪರಾರಿಯಾಗಿದ್ದಾರೆ.

ಸಿಲ್ಕಲ್‍ಪುರ ಗ್ರಾಮದ ಕುಮಾರಸ್ವಾಮಿ ಪತ್ನಿ ಕನಕ 40 ಗ್ರಾಂ ಮಾಂಗಲ್ಯ ಸರವನ್ನು ಕಳೆದುಕೊಂಡವರು.

ಇವರು ಗ್ರಾಮದಿಂದ ಹೊಸಮಾಲಂಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಚಾನಲ್ ರಸ್ತೆಯಲ್ಲಿ ಮುಂಜಾನೆ ಬೆಳಿಗ್ಗೆ 6.30 ರ ಸಮಯದಲ್ಲಿ ವಾಕಿಂಗ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಟಗರಪುರ ಕಡೆಯಿಂದ ಕಾರಿನಲ್ಲಿ ಬಂದ ಇಬ್ಬರು ಮಹಿಳೆಗೆ ಚಾಕುವನ್ನು ತೋರಿಸಿ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತು ಕೊಂಡು ಪರಾರಿಯಾಗಿದ್ದಾರೆ. ಮುಖಕ್ಕೆ ಇಬ್ಬರು ಬಟ್ಟೆ ಕಟ್ಟಿಕೊಂಡಿದ್ದರು.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು