ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ‘ನಮೋ ಬ್ರಿಗೇಡ್ನ’ ಚಕ್ರವರ್ತಿ ಸೂಲಿಬೆಲೆ ಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.

ಪೂರ್ಣಪ್ರಜ್ಞ ವಿದ್ಯಾಪೀಠದ ಆವರಣದಲ್ಲಿ ಸೂಲಿಬೆಲೆ ಭಾಷಣ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಕಾಂಗ್ರೆಸ್ ಕಾರ್ಯಕರ್ತರು, ‘ಚಕ್ರವರ್ತಿ ಅವರು ಧಾರ್ಮಿಕ ಕೇಂದ್ರದ ಆವರಣದಲ್ಲಿ ಪ್ರಚಾರ ಮಾಡುವ ಮೂಲಕ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ್ದಾರೆ’ ಎಂದು ಆರೋಪಿಸಿದರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

ಸ್ಥಳಕ್ಕೆ ಬಂದ ಚುನಾವಣಾ ವೀಕ್ಷಕರು, ‘ದೇವಸ್ಥಾನದ ಪ್ರಾಂಗಣದಲ್ಲಿ ಮತಯಾಚನೆ ಮಾಡಲು ಅವಕಾಶವಿಲ್ಲ. ಕೈ ಮುಗಿದು ತೆರಳಬಹುದು’ ಎಂದು ಆಯೋಜಕರಿಗೆ ಮನವರಿಕೆ ಮಾಡಿಕೊಟ್ಟರು. ಚಕ್ರವರ್ತಿ ಭಾಷಣ ಮೊಟಕುಗೊಳಿಸಿ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.