ಶನಿವಾರ, ಸೆಪ್ಟೆಂಬರ್ 18, 2021
24 °C

ಬಾಲ್ಯ ವಿವಾಹಕ್ಕೆ ತಡೆ; ಬಾಲಕಿ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಇಂಡಿ ತಾಲ್ಲೂಕಿನ ಕ್ಯಾತನಕೇರಿ ಗ್ರಾಮದ ಬಾಲಕಿಯೊಬ್ಬಳ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ತಡೆದಿದೆ.

ನೆರೆಯ ಮಹಾರಾಷ್ಟ್ರದ ಕರನದೊಡ್ಡ ಗ್ರಾಮದಲ್ಲಿ ಬಾಲಕಿಯ ವಿವಾಹದ ಸಿದ್ಧತೆ ನಡೆದಿದ್ದವು. ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೂಚಿಸಿದಂತೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಅಂಗನವಾಡಿ ಮೇಲ್ವಿಚಾರಕಿ, ಹೊರ್ತಿ ಪೊಲೀಸ್ ಠಾಣೆ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ ಬಾಲಕಿಯ ಮನೆಗೆ ಭೇಟಿ ನೀಡಿ ವಿವಾಹಕ್ಕೆ ತಡೆಯೊಡ್ಡಿದೆ.

ಇದೇ ಸಂದರ್ಭ ಪಾಲಕರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಿ, ಬಾಲ್ಯ ವಿವಾಹವನ್ನು ತಡೆಗಟ್ಟಿ, ಬಾಲಕಿಯನ್ನು ರಕ್ಷಿಸಿಕೊಂಡು ವಿಜಯಪುರದ ಬಾಲಕಿಯರ ಸರ್ಕಾರಿ ಬಾಲಮಂದಿರಕ್ಕೆ ಅಭಿರಕ್ಷಣೆಗಾಗಿ ದಾಖಲಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು