ಬುಧವಾರ, ಏಪ್ರಿಲ್ 21, 2021
25 °C

ಅಬ್ರಹಾಂ: ಕ್ರೈಸ್ಟ್ ವಿವಿ ಕುಲಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಕ್ರೈಸ್ಟ್‌ ವಿಶ್ವವಿದ್ಯಾಲಯದ (ಸ್ವಾಯತ್ತ) ನೂತನ ಕುಲಪತಿಯಾಗಿ ಫಾದರ್ ಡಾ.ವಿ.ಎಂ.ಅಬ್ರಹಾಂ ನೇಮಕಗೊಂಡಿದ್ದಾರೆ.

ಹತ್ತು ವರ್ಷಗಳಿಂದ ಅವರು ಸಹ ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ.ಥಾಮಸ್‌ ಮ್ಯಾಥ್ಯೂ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಅವರನ್ನು ನೇಮಿಸಲಾಗಿದೆ. ಮಾರ್ಚ್‌ 1ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಅಬ್ರಹಾಂ ಅವರು ತಮ್ಮ ಪದವಿ ಶಿಕ್ಷಣವನ್ನು ಬೆಂಗಳೂರಿನ ವಿದ್ಯಾಕ್ಷೇತ್ರಂ ಶಿಕ್ಷಣ ಸಂಸ್ಥೆಯಲ್ಲಿ ಪೂರೈಸಿದ್ದಾರೆ. ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯದಿಂದ ಗಣಿತಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಗಣಿತಶಾಸ್ತ್ರದ ‘ಗ್ರಾಫ್‌ ಥಿಯರಿ’ ವಿಷಯದ ಮೇಲೆ ಸಂಶೋಧನೆ ನಡೆಸಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌.ಡಿ ಪದವಿ ಪಡೆದಿದ್ದಾರೆ. ಜಗತ್ತಿನ ಪ್ರಮುಖ ನಿಯತಕಾಲಿಕೆಗಳಲ್ಲಿ ಅವರ ಸಂಶೋಧನಾ ಲೇಖನಗಳು ಪ್ರಕಟವಾಗಿವೆ. ಶೈಕ್ಷಣಿಕ ಕಾರ್ಯಚಟುವಟಿಕೆ ಭಾಗವಾಗಿ ಜಗತ್ತಿನ ಹಲವು ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿದ್ದಾರೆ.

ಜುಲೈನಲ್ಲಿ ಅಮೆರಿಕಾದ ಹಾರ್ವರ್ಡ್‌ ಸ್ಕೂಲ್‌ನಲ್ಲಿ ನಡೆಯುವ ಕುಲಪತಿಗಳ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ
ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು