ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ, ಕಾಂಗ್ರೆಸ್‌ ಮುಖಂಡರ ವಿರುದ್ಧ ಪ್ರಕರಣ

ಶುಕ್ರವಾರ, ಏಪ್ರಿಲ್ 26, 2019
35 °C

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ, ಕಾಂಗ್ರೆಸ್‌ ಮುಖಂಡರ ವಿರುದ್ಧ ಪ್ರಕರಣ

Published:
Updated:

ಚಾಮರಾಜನಗರ: ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಬುಧವಾರ ಜಿಲ್ಲೆಯಲ್ಲಿ  ಮೂರು ಪ್ರಕರಣಗಳು ದಾಖಲಾಗಿವೆ.

ಎರಡು ಪ್ರಕರಣಗಳಲ್ಲಿ ಬಿಜೆಪಿಯ ಇಬ್ಬರು ಮುಖಂಡರ ವಿರುದ್ಧ ದೂರು ದಾಖಲಾಗಿದ್ದ‌ರೆ, ಮತ್ತೊಂದರಲ್ಲಿ ಕಾಂಗ್ರೆಸ್‌ನ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಚುನಾವಣಾಧಿಕಾರಿಗಳ ಅನುಮತಿ ಪಡೆಯದೆ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಹೊಸಪುರ, ಹೊಣಕನಪುರ ಹಾಗೂ ಕೋಟೆಕೆರೆ ಗ್ರಾಮಗಳಲ್ಲಿ ಮತ ಪ್ರಚಾರ ಮತ್ತು ಬಹಿರಂಗ ಸಭೆಗಳನ್ನು ನಡೆಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಫ್ಲೈಯಿಂಗ್‌ ಸ್ಕ್ಯಾಡ್‌ ಅಧಿಕಾರಿಗಳು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುನಿರಾಜು ಹಾಗೂ ಮುಖಂಡ ಗಣೇಶ್‌ ಪ್ರಸಾದ್‌ ವಿರುದ್ಧ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

ಗುಂಡ್ಲುಪೇಟೆಯ ಸಿ.ಎಂ.ಎಸ್ ಕಲ್ಯಾಣಮಂಟಪದಲ್ಲಿ ಪ್ರಚಾರ ಸಭೆ ನಡೆಸಲು ಮಾತ್ರ ಅನುಮತಿ ಪಡೆದು, ಸಭೆಯಲ್ಲಿ ಕಾರ್ಯಕರ್ತರಿಗೆ ಉಪಹಾರ ವ್ಯವಸ್ಥೆ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಂಡಲ ಅಧ್ಯಕ್ಷ ಎನ್. ಮಲ್ಲೇಶ್ ಅವರ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಸಂತೇಮರಹಳ್ಳಿ ಗ್ರಾಮದ ಅಮೃತ ಹೋಟೆಲ್‍ನಲ್ಲಿ ಚುನಾವಣಾಧಿಕಾರಿಗಳ ಅನುಮತಿ ಪಡೆಯದೆ ಸಭೆ ನಡೆಸಿರುವ ಸಂಬಂಧ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೂಡ್ಲೂರು ಶ್ರೀಧರಮೂರ್ತಿ ಅವರ ವಿರುದ್ಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

₹1.25 ಲಕ್ಷ ನಗದು ವಶ, ಕಾರು ಜಪ್ತಿ

ಗುಂಡ್ಲುಪೇಟೆ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ₹1.25 ಲಕ್ಷ ನಗದನ್ನು ಫ್ಲೈಯಿಂಗ್ ಸ್ಕ್ಯಾಡ್ ಅಧಿಕಾರಿಗಳು ಗುಂಡ್ಲುಪೇಟೆ ಪಟ್ಟಣದ ಊಟಿ ಮುಖ್ಯ ರಸ್ತೆಯಲ್ಲಿ ವಶಪಡಿಸಿಕೊಂಡಿದ್ದಾರೆ.

ಇನ್ನೊವಾ ಕಾರಿನಲ್ಲಿ ಅಬ್ದುಲ್ ನಾಸರ್ ಎಂಬುವವರು ದಾಖಲೆ ಇಲ್ಲದೆ ಹಣ ಕೊಂಡೊಯ್ಯುತ್ತಿದ್ದ ವೇಳೆ ತಪಾಸಣೆ ನಡೆಸಿ ಹಣವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕಾರನ್ನು ಜಪ್ತಿ ಮಾಡಲಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !