ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕಕಾಲಕ್ಕೆ ಚುನಾವಣೆ ಸಲಹೆ ಕೋರಿದ ಕಾನೂನು ಆಯೋಗ

Last Updated 18 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ಸಲಹೆಗಳನ್ನು ನೀಡುವಂತೆ ಕಾನೂನು ಆಯೋಗ ಕೋರಿದೆ.

ಸಂವಿಧಾನ ಮತ್ತು ಸಂಬಂಧಪಟ್ಟ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಏಕಕಾಲದಲ್ಲಿ ಚುನಾವಣೆ ನಡೆಸುವುದು ಸಾಧ್ಯವಿದೆ ಎಂದು ಆಯೋಗ ಹೇಳಿದೆ.

ಏಕಕಾಲದಲ್ಲಿ ಚುನಾವಣೆ ನಡೆಸುವ ಯೋಜನೆಯನ್ನು ಎರಡು ಹಂತಗಳಲ್ಲಿ ಪೂರ್ಣಗೊಳಿಸಬಹುದು. 2019ರ ಮೊದಲ ಭಾಗದಲ್ಲಿ ಒಂದು ಹಂತವನ್ನು ಜಾರಿಗೆ ತಂದರೆ, 2024ರಲ್ಲಿ ಇದನ್ನು ಪೂರ್ಣವಾಗಿ ಜಾರಿಗೊಳಿಸಬಹುದು. 2021ರೊಳಗೆ ಅವಧಿ ಮುಗಿಯುವ ವಿಧಾನಸಭೆಗಳಿಗೆ 2019ರಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಸಬಹುದು. ಉಳಿದ ರಾಜ್ಯಗಳಿಗೆ 2024ರಲ್ಲಿ ಚುನಾವಣೆ ಮಾಡಬಹುದು ಎಂದು ಆಯೋಗ ತಿಳಿಸಿದೆ.

ಆದರೆ, ಇದಕ್ಕಾಗಿ ಲೋಕಸಭೆ ಹಾಗೂ ವಿಧಾನಸಭೆಗಳ ಅಧಿಕಾರಾವಧಿಗೆ ಸಂಬಂಧಿಸಿದ ಸಂವಿಧಾನದ 83 (2) ಮತ್ತು 172 (1) ವಿಧಿಗಳು ಹಾಗೂ ಜನಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರಬೇಕಿದೆ.

ಈ ತಿದ್ದುಪಡಿಗಳಿಗೆ ಬಹುಸಂಖ್ಯೆಯ ರಾಜ್ಯಗಳು ಅನುಮೋದನೆ ನೀಡಬೇಕು ಎಂದು ಆಯೋಗ ಹೇಳಿದೆ. ಸಂವಿಧಾನ ತಜ್ಞರು, ರಾಜಕೀಯ ಪಕ್ಷಗಳು ಮತ್ತು ಇತರರು ತಮ್ಮ ಅಭಿಪ್ರಾಯಗಳನ್ನು ಮೇ 8ರೊಳಗೆ ನೀಡುವಂತೆ ಆಯೋಗ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT