ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಳಸಿದ್ದು, ಹಸಿದದ್ದು ಸೇರಿ ಸಮ್ಮಿಶ್ರ’

ನೂತನ ಸರ್ಕಾರದ ಬಗ್ಗೆ ಶಾಸಕ ವೀರಣ್ಣ ಚರಂತಿಮಠ ವ್ಯಂಗ್ಯ
Last Updated 28 ಮೇ 2018, 9:53 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಐದು ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಹಳಸಿತ್ತು. ಅಧಿಕಾರ ಸಿಗದೇ ಜೆಡಿಎಸ್ ಪಕ್ಷ ಹಸಿದು ಕುಳಿತಿತ್ತು. ಹೀಗಾಗಿ, ಎರಡು ಪಕ್ಷಗಳು ಕೂಡಿಕೊಂಡು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿವೆ’ ಎಂದು ಶಾಸಕ ವೀರಣ್ಣ ಚರಂತಿಮಠ ವ್ಯಂಗ್ಯವಾಡಿದರು.

ವಿದ್ಯಾಗಿರಿಯಲ್ಲಿ ಬಾಗಲಕೋಟೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ
ದಲ್ಲಿ ಮಾತನಾಡಿ, ‘ರಾಜ್ಯಪಾಲರು ಮೊದಲು 15 ದಿನಗಳ ಕಾಲಾವಕಾಶ ನೀಡಿದ್ದರು. ಅದೇ ಇದ್ದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿತ್ತು. ಸುಪ್ರೀಂ ಕೋರ್ಟ್‌ ಆದೇಶ ಪಾಲನೆ ಮಾಡಬೇಕಾಗಿ ಬಂದಿದ್ದರಿಂದ ತುರ್ತಾಗಿ ಬಹುಮತ ಸಾಬೀತುಪಡಿಸಲು ಆಗಲಿಲ್ಲ ಎಂದರು.

‘ಸಮ್ಮಿಶ್ರ ಸರ್ಕಾರದಲ್ಲಿ ಈಗಾಗಲೇ ಅನೇಕ ರೀತಿಯ ಗೊಂದಲಗಳು ಸೃಷ್ಟಿಯಾಗಿವೆ. ಸರ್ಕಾರದ ಆಯುಷ್ಯ ಕೇವಲ ನಾಲ್ಕರಿಂದ ಆರು ತಿಂಗಳು ಮಾತ್ರ. ನಂತರ ಮತ್ತೆ ಬಿಜೆಪಿ ಸರ್ಕಾರ ಬರಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿಯೂ ಸಹಿತ ಪಕ್ಷ ಸ್ಪಷ್ಟವಾದ ಬಹುಮತ ಪಡೆಯಲಿದೆ’ ಎಂದರು.

ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವಲ್ಲಿ ಪಕ್ಷದ ಕಾರ್ಯಕರ್ತರು ಸೈನಿಕರಂತೆ ಕೆಲಸ ಮಾಡಿದ್ದಾರೆ. ಮುಂಬರುವ ನಗರ ಸ್ಥಳೀಯ ಸಂಸ್ಥೆ ಹಾಗೂ ಲೋಕಸಭಾ ಚುನಾವಣೆಯಲ್ಲಿಯೂ ಕೂಡ ಗೆಲುವು ಸಾಧಿಸಲು ಈಗಾಗಲೇ ಕಾರ್ಯಕರ್ತರ ಪಡೆ ಸಿದ್ಧವಾಗಿದೆ’ ಎಂದರು.

ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಅವರು ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಹಳಷ್ಟು ತೊಂದರೆ ಕೊಟ್ಟಿದ್ದಾರೆ. ಜಿಲ್ಲೆಯು ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆ ಉಳಿದಿದೆ’ ಎಂದು ದೂರಿದರು.

‘ಪ್ರಧಾನಿ ಮೋದಿ ಅವರು ಅಭಿವೃದ್ಧಿಯ ದೂರದೃಷ್ಟಿಯನ್ನು ಹೊಂದಿದ್ದಾರೆ. ಆದರೆ ಈ ಹಿಂದಿನ ಕಾಂಗ್ರೆಸ್ ಸರ್ಕಾರ ಕೇಂದ್ರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡಿಲ್ಲ’ ಎಂದರು.

ಚರಂತಿಮಠರ ಗೆಲುವಿನಿಂದ ಪಕ್ಷಕ್ಕೆ ಆನೆ ಬಲಬಂದಂತಾಗಿದೆ. ರಾಜ್ಯದ ಸಮ್ಮಿಶ್ರ ಸರ್ಕಾರದ ಸವಾಲುಗಳನ್ನು ಎದುರಿಸಿ ಜನರ ಕೆಲಸ ಕಾರ್ಯಗಳನ್ನು ಮಾಡಿಕೊಡುತ್ತೇವೆ’ ಎಂದರು.

ಮಾಜಿ ಶಾಸಕ ಪಿ.ಎಚ್.ಪೂಜಾರ ಮಾತನಾಡಿ, ಒಳ್ಳೆಯ ಕೆಲಸಕ್ಕೆ ಬೆನ್ನುತಟ್ಟಿ ಅಭಿನಂದನೆ ಸಲ್ಲಿಸುವ ಕೆಲಸ
ವಾಗಬೇಕು. ಇದರಿಂದ ಅಭಿನಂದಿಸುವ ವ್ಯಕ್ತಿ ಮತ್ತಷ್ಟು ಎತ್ತರಕ್ಕೆ ಬೆಳೆಯುತ್ತಾನೆ. ಕಾರ್ಯಕರ್ತರನ್ನು ಅಭಿನಂದಿಸುವ ಕಾರ್ಯ ಸ್ತುತ್ಯಾರ್ಹ ಎಂದರು.

ಕೇಂದ್ರ ಸರ್ಕಾರ ಕಳೆದ ನಾಲ್ಕು ವರ್ಷಗಳ ಅಧಿಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಸನಾತನ ಧರ್ಮ ಮತ್ತು ಸಂಸ್ಕೃತಿಯನ್ನು ಕಾಪಾಡುವ ಕೆಲಸವನ್ನು ಮಾಡುತ್ತಿದ್ದಾರೆ. 2019ರ ಲೋಕಸಭಾ ಚುನಾವಣೆ ದೊಡ್ಡ ಸವಾಲಾಗಿದೆ. ದಶಕಗಳ ಭ್ರಷ್ಟಾಚಾರದ ಆಡಳಿತ ಕೊನೆಗಾಣಿಸಲು ಕೇವಲ ಐದು ವರ್ಷ ಸಾಕಾಗುವುದಿಲ್ಲ. ಹೀಗಾಗಿ ಅದನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಬಹುಮತದೊಂದಿಗೆ ಸರ್ಕಾರ ರಚಿಸುವಂತಾಗಲು ಕಾರ್ಯಕರ್ತರು ಶ್ರಮಿಸಬೇಕು’ ಎಂದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ನಮ್ಮ ಧರ್ಮ ಸಂಸ್ಕೃ
ತಿಯ ಪ್ರಶ್ನೆಯಾಗಿದೆ.

ಭವಿಷ್ಯದಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸಲು ಪ್ರತಿಯೊಬ್ಬರು ಸಿದ್ಧರಾಗಬೇಕಿದೆ ಎಂದರು. ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು. ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ, ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಜಿ.ಎನ್.ಪಾಟೀಲ, ನಗರಸಭೆ ಅಧ್ಯಕ್ಷ ದ್ಯಾವಪ್ಪ ರಾಕುಂಪಿ, ಅಶೋಕ ಲಿಂಬಾವಳಿ, ಜ್ಯೋತಿ ಭಜಂತ್ರಿ, ರಾಜು ನಾಯ್ಕರ, ರಾಜು ರೇವಣಕರ, ಬಸವರಾಜ ಅವರಾಧಿ, ಹೂವಪ್ಪ ರಾಠೋಡ ಮತ್ತಿತರರು ಉಪಸ್ಥಿತರಿದ್ದರು.

**
ರೈತರ ಸಾಲಮನ್ನಾ ಮಾಡುವು ದಾಗಿ ಹೇಳಿದ್ದ ಕುಮಾರಸ್ವಾಮಿ, ಈಗ ಪಕ್ಷಕ್ಕೆ ಸಂಪೂರ್ಣ ಬಹುಮತ ಬಂದಿದ್ದರೆ ಮಾಡುತ್ತಿದ್ದೆ ಎಂದು ಉಲ್ಟಾ ಹೊಡೆದಿದ್ದಾರೆ. ಬಹುಮತ ಬಾರದೇ ಅವರು ಸಿ.ಎಂ ಆಗಿದ್ದೇಕೆ
ವೀರಣ್ಣ ಚರಂತಿಮಠ, ಶಾಸಕ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT