ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಥಳೀಯರ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ: ಸೀತಾರಾಂ

Last Updated 16 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಮಲ್ಲೇಶ್ವರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಆಗಿರಲಿಲ್ಲ. ಆದರೂ ಪಕ್ಷದ ವರಿಷ್ಠರು ಇಲ್ಲಿ ನನಗೆ ಟಿಕೆಟ್‌ ನೀಡಿದ್ದಾರೆ. ಹಾಗಾಗಿ, ಪಕ್ಷದ ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ ಮುಂದಿನ ಹೆಜ್ಜೆ ಇಡುತ್ತೇನೆ’ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಎಂ.ಆರ್‌.ಸೀತಾರಾಂ ‘ಪ್ರಜಾವಾಣಿ’ಗೆ ತಿಳಿಸಿದರು.

‘ಸಚಿವನಾದ ಬಳಿಕ ನನಗೆ ಮುಖ್ಯಮಂತ್ರಿಯವರು ಕೊಡಗು ಜಿಲ್ಲೆಯ ಉಸ್ತುವಾರಿಯನ್ನೂ ವಹಿಸಿದರು. ವಾರದಲ್ಲಿ ಮೂರು ದಿನ ಆ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದೆ. ಕಳೆದ ಬಾರಿಯೂ ನಾನು ಇಲ್ಲಿ ಸ್ಪರ್ಧಿಸಿಲ್ಲ. ನಾಲ್ಕು ವರ್ಷಗಳಿಂದ ಇಲ್ಲಿನ ಸ್ಥಳೀಯ ನಾಯಕರ ಹಾಗೂ ಕಾರ್ಯಕರ್ತರ ನೇರ ಸಂಪರ್ಕ ಇರಲಿಲ್ಲ. ಹಾಗಾಗಿ, ಅವರೆಲ್ಲರ ವಿಶ್ವಾಸ ಗಳಿಸಿ ಮುಂದುವರಿಯಬೇಕಿದೆ’ ಎಂದರು.

‘ಇಂದು ಕೆಲು ನಾಯಕರ ಜೊತೆ ಚರ್ಚಿಸಿದ್ದೇನೆ. ಪಾಲಿಕೆ ಸದಸ್ಯರು ಹಾಗೂ ಪಾಲಿಕೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ನಾಳೆ ಸಮಾಲೋಚನೆ ನಡೆಸುತ್ತೇನೆ. ಅವರೆಲ್ಲರ ಅಭಿಪ್ರಾಯಪಡೆದು ಮುಂದುವರಿಯುತ್ತೇನೆ’ ಎಂದರು.

‘ಪಕ್ಷದ ವರಿಷ್ಠರು ನನಗೆ ವಹಿಸಿರುವ ಜವಾಬ್ದಾರಿಯಿಂದ ವಿಮುಖನಾಗುವುದಿಲ್ಲ. ಪುನರ್ವಿಂಗಡಣೆಗೆ ಮುನ್ನ 10 ವರ್ಷ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದೆ. ಹಾಗಾಗಿ ಇಲ್ಲಿನ ಮತದಾರರು ನನಗೆ ಪರಿಚಿತರೇ ಆಗಿದ್ದಾರೆ. ನಾಯಕರು ಅವರಿಗೆ ಬೇಕಾದಾಗ ಮಾತ್ರ ನಮ್ಮ ಬಳಿ ಬರುತ್ತಾರೆ ಎಂಬ ಭಾವನೆ ಕಾರ್ಯಕರ್ತರಲ್ಲಿ ಬೆಳೆಯಬಾರದು ಎಂಬ ಕಾರಣಕ್ಕಾಗಿ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಪ್ರಯತ್ನ ಮಾಡುತ್ತಿದ್ದೇನೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT