ವಾರಾಣಸಿ: ದೇಶದ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದಾದ ವಾರಾಣಸಿಯಲ್ಲಿ ಅಂತರರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದೆ.

ಕ್ರೀಡಾಂಗಣ ನಿರ್ಮಿಸಲು ಭೂಸ್ವಾಧೀನಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರವು ₹ 121 ಕೋಟಿ ಖರ್ಚು ಮಾಡಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ₹ 330 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಿಸಲಿದೆ. ಇದರಲ್ಲಿ ಕೆಲವು ವಿಶೇಷ ವಿನ್ಯಾಸಗಳನ್ನು ಮಾಡಲಾಗುತ್ತಿದೆ. ಈ ಮೈದಾನದ ದೀಪದ ಸ್ಥಂಭಗಳು ಶಿವನ ತ್ರಿಶೂಲದ ವಿನ್ಯಾಸವನ್ನು ಹೋಲುತ್ತವೆ. ಕಟ್ಟಡದ ವಿನ್ಯಾಸವನ್ನು ಡಮರುಗದ ಮಾದರಿಯಲ್ಲಿ ನಿರ್ಮಿಸಲಾಗುತ್ತಿದೆ. ಬಿಲ್ವ ಪತ್ರೆಯ ಆಕಾರವನ್ನು ಹೋಲುವ ವಿನ್ಯಾಸಗಳೂ ಇಲ್ಲಿರಲಿವೆ.

ಕಾಶಿಯೆಂದೂ ಕರೆಯಲಾಗುವ ವಾರಾಣಸಿಯ ಸ್ನಾನ ಘಟ್ಟಗಳ ಮೆಟ್ಟಿಲುಗಳ ಮಾದರಿಯಲ್ಲಿ ಪ್ರೇಕ್ಷಕರ ಗ್ಯಾಲರಿಯು ನಿರ್ಮಾಣವಾಗಲಿದೆ. 30 ಸಾವಿರ ಪ್ರೇಕ್ಷಕರ ಸಾಮರ್ಥ್ಯದ ಗ್ಯಾಲರಿ ಇದಾಗಲಿದೆ. ರಾಜಾತಾಲಾಬ್ ಪ್ರದೇಶದ ರಿಂಗ್ ರಸ್ತೆಯ ಸಮೀಪ ಈ ಕ್ರೀಡಾಂಗಣ ತಲೆ ಎತ್ತುತ್ತಿದೆ.

ಶನಿವಾರ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸುವರು. ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ಸುನಿಲ್ ಗಾವಸ್ಕರ್ ಮತ್ತು ರವಿಶಾಸ್ತ್ರಿ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಉಪಾಧ್ಯಕ್ಷ ರಾಜೀವ ಶುಕ್ಲಾ ಮತ್ತು ಕಾರ್ಯದರ್ಶಿ ಜಯ್ ಶಾ ಹಾಜರಾಗಲಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಾನ್ಪುರ ಹಾಗೂ ಲಖನೌನಲ್ಲಿ ಅಂತರರಾಷ್ಟ್ರೀಯ ಕ್ರೀಡಾಂಗಣಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.