ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಸಾಲ ಮನ್ನಾ: ಮುಖ್ಯ ಕಾರ್ಯದರ್ಶಿಗೆ ವಾಟಾಳ್ ಮನವಿ

Last Updated 28 ಮೇ 2018, 8:35 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ ಗಳು ಸೇರಿದಂತೆ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ಕೋರಿ ರಾಜ್ಯ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರಿಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟ ಮನವಿ ಸಲ್ಲಿಸಿತು.

ವಿಧಾನಸೌಧದಲ್ಲಿ ರತ್ನಪ್ರಭಾ ಅವರನ್ನು ಭೇಟಿಯಾದ ಒಕ್ಕೂಟದ ಅಧ್ಯಕ್ಷ ವಾಟಾಳ್, ರಾಜ್ಯದಲ್ಲಿ ಮಳೆ ಬೆಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ತಕ್ಷಣ  ಸರ್ಕಾರ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಸಾಲ ಪಾವತಿಸಲಾಗದೆ ನೂರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ರೈತರ  ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಬಳಿಕ ಮಾತನಾಡಿದ ವಾಟಾಳ್, ಮಹಾದಾಯಿ, ಕಾವೇರಿ ರೈತರು ಮಳೆ ಬೆಳೆ ಇಲ್ಲದೇ ಕಂಗಾಲಾಗಿದ್ದಾರೆ. ಹೀಗಾಗಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದೇ ಸಂದರ್ಭ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗದ ಇಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಆ ಮೂಲಕ ಆ ಭಾಗದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಒತ್ತಾಯಿಸಿದರು.

ಈ ವೇಳೆ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಸಾ.ರಾ. ಗೋವಿಂದ್, ಪ್ರವೀಣ್ ಕುಮಾರ್ ಶೆಟ್ಟಿ, ಶಿವರಾಮೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT