ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Published : 28 ಸೆಪ್ಟೆಂಬರ್ 2024, 11:29 IST
Last Updated : 28 ಸೆಪ್ಟೆಂಬರ್ 2024, 11:29 IST
ಫಾಲೋ ಮಾಡಿ
Comments

ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು.

ಕೆಲವು ಪ್ರಗತಿಪರ ಸಂಘಟನೆಗಳು ಚಾಮುಂಡಿ‌ಬೆಟ್ಟದಲ್ಲಿ‌ ಭಾನುವಾರ ಹಮ್ಮಿಕೊಂಡಿರುವ ಮಹಿಷ ದಸರಾ ಆಚರಣೆ ಬಗ್ಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಕಾರ್ಯಕ್ರಮ ಮಾಡುವವರು ಕಾನೂನು–ಸುವ್ಯವಸ್ಥೆಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಷ್ಟೆ’ ಎಂದರು.

‘ಇಂಥದ್ದನ್ನು ಮಾಡಿ ಅಥವಾ ಮಾಡಬೇಡಿ ಎಂದು ಹೇಳಲು ನಾವ್ಯಾರು? ದೇಶದ ನಾಗರಿಕತೆಯಲ್ಲೇ ನೀರು, ಕಲ್ಲು, ಮಣ್ಣನ್ನು ಪೂಜಿಸುವ ಸಂಸ್ಕೃತಿ ಇದೆ. ಅವರವರ ಧಾರ್ಮಿಕ ನಂಬಿಕೆ ಅವರವರದ್ದು. ನೀವು ಮಾಡಲೇ ಬೇಡಿ ಎಂದು ವಿರೋಧಿಸುವುದಕ್ಕೆ ಯಾರಿಗೂ ಹಕ್ಕಿಲ್ಲ. ಎಲ್ಲ ಪರಿಸ್ಥಿತಿಯನ್ನೂ ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT