ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೈಸೂರು ದಸರಾ ಉದ್ಘಾಟನೆ: ಹಂಪನಾಗೆ ಅಧಿಕೃತ ಆಹ್ವಾನ

Published : 26 ಸೆಪ್ಟೆಂಬರ್ 2024, 5:44 IST
Last Updated : 26 ಸೆಪ್ಟೆಂಬರ್ 2024, 5:44 IST
ಫಾಲೋ ಮಾಡಿ
Comments

ಮೈಸೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಜಿಲ್ಲಾಡಳಿತದಿಂದ ಅಧಿಕೃತವಾಗಿ ಗುರುವಾರ ಆಮಂತ್ರಣ ನೀಡಲಾಯತು.

ಬೆಂಗಳೂರಿನ ಕ್ರಸೆಂಟ್ ರಸ್ತೆಯ ಅಮೆರಿಕನ್‌ ಕಾಲೊನಿಯಲ್ಲಿರುವ ಅವರ ನಿವಾಸದಲ್ಲಿ ಅಧಿಕಾರಿಗಳು ಆಹ್ವಾನ ನೀಡಿದರು. ಮೈಸೂರು ಪೇಟ ತೋಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕ ಸ್ವಾಗತಿಸಿದರು.

ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ‌ ಲಾಟ್ಕರ್, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ, ಎಸ್ಪಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಪಾಲ್ಗೊಂಡಿದ್ದರು.‌

ಈ ಬಾರಿಯ ನಾಡಹಬ್ಬ ಅ.3ರಿಂದ 12ರವರೆಗೆ ನಡೆಯಲಿದೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ

ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜಿಲ್ಲಾಡಳಿತದಿಂದ ಬೆಂಗಳೂರಿನಲ್ಲಿ ಗುರುವಾರ ಆಹ್ವಾನಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅಧಿಕೃತ ಆಮಂತ್ರಣ ಪತ್ರ ನೀಡಿ ಸನ್ಮಾನಿಸಿದರು. ಶಾಸಕರಾದ ಅನಿಲ್‌ ಚಿಕ್ಕಮಾದು, ಡಿ.ರವಿಶಂಕರ್‌, ವಿಧಾನಪರಿಷತ್‌ ಸದಸ್ಯರಾದ ಸಿ.ಎನ್. ಮಂಜೇಗೌಡ, ಡಾ.ಡಿ. ತಿಮ್ಮಯ್ಯ, ಡಾ.ಯತೀಂದ್ರ ಸಿದ್ದರಾಮಯ್ಯ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT