ಜಮಖಂಡಿ: ತಂದೆ-ತಾಯಿಗಳು ತಮ್ಮ ಮಕ್ಕಳಿಗೆ ಸಂಸ್ಕಾರ ನೀಡಬೇಕು.ಸಂಸ್ಕಾರವಂತ ಮಕ್ಕಳು ವಿನಯಶೀಲರಾಗಿ ಶಿಕ್ಷಣ ಪಡೆಯುತ್ತಾರೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ತಂದೆ-ತಾಯಿಗಳೇ ಮಾದರಿಯಾಗಬೇಕು ಎಂದು ಜಕನೂರ-ಕುಂಚನೂರ ಗ್ರಾಮಗಳ ಕಮರಿಮಠದ ಸಿದ್ದಲಿಂಗದೇವರು ಹೇಳಿದರು.

ತಾಲ್ಲೂಕಿನ ಹುಲ್ಯಾಳ ಶ್ರೀಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಪ್ರತಿ ತಿಂಗಳ 4ನೇ ಭಾನುವಾರ ಹಮ್ಮಿಕೊಳ್ಳುವ ಶ್ರೀಗುರುದೇವ ಸತ್ಸಂಗ ಮಾರ್ಚ್ 22ರ ಮಾಸಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ, ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ’ ಕುರಿತು ಅನುಭಾವ ಹಂಚಿಕೊಂಡರು.

ಶರೀರ ಸದೃಢವಾಗಿದ್ದರೆಮಾತ್ರಸಮಾಜಕ್ಕೆ ಅಳಿಲು ಸೇವೆ ಸಲ್ಲಿಸಬಹುದು. ಉತ್ತಮ ನಾಗರಿಕರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದರು.

ಗುರುದೇವಾಶ್ರಮದ ಹರ್ಷಾನಂದ ಸ್ವಾಮಿಗಳು ನೇತೃತ್ವ ವಹಿಸಿ, ಆನ್ಲೈನ್ ಗೇಮ್ ಆಡಿ ಸಾಲ ಮಾಡಿಕೊಂಡು ಮಕ್ಕಳು ಹಾಳಾಗುತ್ತಿದ್ದಾರೆ. ಸಾಲ ಕೊಡುವವರು ಮಕ್ಕಳ ಪಾಲಕರ ಸಮ್ಮತಿ ಮತ್ತು ಗ್ರಾಮದ ಇಬ್ಬರು ಹಿರಿಯರ ಸಹಮತವಿದ್ದರೆ ಮಾತ್ರ ಸಾಲ ಕೊಡಬೇಕು ಎಂದರು.

ಶ್ರೀಗುರುದೇವ ಸಂಗೀತ ಬಳಗದ ಕಲಾವಿದರಾದ ಗುರುಬಸಗೌಡ ಪಾಟೀಲ, ಪರಮೇಶ್ವರ ತೇಲಿ, ರಾಮಚಂದ್ರ ಹೂಗಾರ, ಸಿದ್ದು ಉಪ್ಪಲದಿನ್ನಿ ಸಂಗೀತ ಸೇವೆ ಸಲ್ಲಿಸಿದರು. ನಿವೃತ್ತ ಶಿಕ್ಷಕ ಗುರುನಾಥ ಸುತಾರ ಸ್ವಾಗತಿಸಿದರು. ಪೃಥ್ವಿರಾಜ ಹೊನಗೌಡ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-19-117869413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.