ಲಕ್ಷ್ಮೇಶ್ವರ: ‘12ನೇ ಶತಮಾನದ ಶರಣರು ವಚನ ಸಾಹಿತ್ಯದ ಮೂಲಕ ಕನ್ನಡ ನಾಡು, ಭಾಷೆಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ವಚನಗಳು ಕನ್ನಡ ಸಾಹಿತ್ಯಕ್ಕೆ ಜೀವಾಳ ಆಗಿವೆ. ಶರಣರು ಕಲ್ಯಾಣದಲ್ಲಿ ಸಾಮಾಜಿಕ ಕ್ರಾಂತಿ ಮಾಡುವ ಮೂಲಕ ಸಮಾಜದಲ್ಲಿನ ಮೂಢನಂಬಿಕೆಗಳನ್ನು ಕಿತ್ತೊಗೆಯುವ ಕೆಲಸ ಮಾಡಿದರು’ ಎಂದು ಗದಗ ತಾಲ್ಲೂಕು ಗ್ರಾಮೀಣ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಎಂ. ಮರಿಗೌಡರ ಹೇಳಿದರು.

ಪಟ್ಟಣದ ಈಶ್ವರ ನಗರದ ಈಶ್ವರ ದೇವಸ್ಥಾನದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ ವತಿಯಿಂದ ಭಾನುವಾರ ಚನಬಸಪ್ಪ ರುದ್ರಪ್ಪ ಅಳಗವಾಡಿ ಹಾಗೂ ಗೌರಮ್ಮ ಚನಬಸಪ್ಪ ಅಳಗವಾಡಿ ಅವರ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಶರಣರು ವಚನಗಳ ಮೂಲಕ ಆಧ್ಯಾತ್ಮಿಕ ಲೋಕಕ್ಕೆ ಹೋಗುವ ಸರಳ ದಾರಿಯನ್ನು ತೋರಿಸಿದ್ದಾರೆ. 12ನೇ ಶತಮಾನದಲ್ಲಿ ವೈಚಾರಿಕ ಕ್ರಾಂತಿ ಮಾಡಿ ಸಾಮಾಜಿಕ ಪರಿವರ್ತನೆಗೆ ಶರಣರು ನಾಂದಿ ಹಾಡಿದರು. ಚನ್ನಬಸವ ಶರಣರು ನೂರಾರು ವಚನಗಳನ್ನು ರಚಿಸುವ ಮೂಲಕ ಹಿರಿಯ ಶರಣರ ಚಿಂತನೆಗಳನ್ನು ತಮ್ಮ ನುಡಿಗಟ್ಟುಗಳಲ್ಲಿ ಹೇಳಿದ್ದಾರೆ. ವಚನ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕಾರ್ಯವನ್ನು ಶರಣ ಸಾಹಿತ್ಯ ಪರಿಷತ್ ಮಾಡುತ್ತಿರುವುದು ಶ್ಲಾಘನೀಯ’ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ಎ. ಬಳಿಗೇರ ಮಾತನಾಡಿ, ‘ಶರಣರು ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು. ಶರಣರ ವಚನಗಳು ಜಗತ್ತಿನ ಬೇರೆ ಭಾಷೆಯಲ್ಲಿ ಇರದಂತ ವಿಶಿಷ್ಟ ಸಾಮಾಜಿಕ ಮೌಲ್ಯಗಳನ್ನು ಒಳಗೊಂಡಿವೆ. ವಚನಗಳನ್ನು ನಮ್ಮ ಮಕ್ಕಳಿಗೆ ಕಲಿಸುವ ಮೂಲಕ ನಮ್ಮ ಸಂಸ್ಕೃತಿ, ಸಂಪ್ರದಾಯ, ನೈತಿಕ ಮೌಲ್ಯಗಳ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು’ ಎಂದು ಹೇಳಿದರು.

ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಎಲ್.ಎಸ್. ಅರಳಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಗದಗ ಜಿಲ್ಲಾ ಕದಳಿ ಮಹಿಳಾ ವೇದಿಕೆಯ ಕಾರ್ಯದರ್ಶಿ ಅಶ್ವಿನಿ ಅಂಕಲಕೋಟಿ, ಚಂಬಣ್ಣ ಬಾಳಿಕಾಯಿ, ಅಶೋಕ ಸೊರಟೂರ, ಶಕುಂತಲಾ ಅಳಗವಾಡಿ ಮಾತನಾಡಿದರು. ಈ ವೇಳೆ ಕಾಶಿಯಾತ್ರೆ ಪೂರೈಸಿದ ಭಕ್ತರಿಗೆ ಸನ್ಮಾನಿಸಲಾಯಿತು.

ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಸಿ.ಆರ್. ಲಕ್ಕುಂಡಿಮಠ, ಎಸ್.ಎಸ್. ಪೂಜಾರ, ನಿರ್ಮಲಾ ಅರಳಿ, ಗೊರವರ, ಬಸವರಾಜ ಸಂಗಪ್ಪಶೆಟ್ಟರ, ಎಂ.ಕೆ. ಕಳ್ಳಿಮಠ, ನಾಗರಾಜ ಹೇಮಗಿರಿಮಠ ಇದ್ದರು. ಮಾಲಾದೇವಿ ದಂದರಗಿ ಹಾಗೂ ಮಹಾನಂದಾ ಕೊಣ್ಣೂರ ಕಾರ್ಯಕ್ರಮ ನಿರೂಪಿಸಿದರು. ಈರಣ್ಣ ಮಡಿವಾಳರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-23-1651636017

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.