ಕಾರವಾರ: ‘ಒತ್ತಡದ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ಕ್ಯಾನ್ಸರ್ ಕಾಯಿಲೆ ಹೆಚ್ಚಾಗಿದ್ದು, ಇದನ್ನು ಗುಣಪಡಿಸುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ’ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಕ್ರಿಮ್ಸ್) ನಿರ್ದೇಶಕಿ ಡಾ.ಪೂರ್ಣಿಮಾ ಆರ್.ಟಿ ಹೇಳಿದರು.

ಇಲ್ಲಿನ ಕ್ರಿಮ್ಸ್ ಸಭಾಂಗಣದಲ್ಲಿ ಗುರುವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕ್ಯಾನ್ಸರ್ ಜಾಗೃತಿ ಹಾಗೂ ತಪಾಸಣೆ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಕ್ಯಾನ್ಸರ್ ಬರದಂತೆ ಮುನ್ನೆಚ್ಚರಿಕೆ ವಹಿಸುವುದೇ ರೋಗಕ್ಕೆ ಪರಿಣಾಮಕಾರಿ ಮದ್ದು. ಈ ಕಾಯಿಲೆ ಕುರಿತು ಸಾರ್ವಜನಿಕರಲ್ಲಿ ಪರಿಣಾಮಕಾರಿ ರೀತಿಯಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದರು.

ಕ್ರಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ನರೇಶ ಪಾವಸ್ಕರ್ ಮಾತನಾಡಿ, ‘ಕ್ಯಾನ್ಸರ್ ಬಂದರೆ ಸಂಪೂರ್ಣವಾಗಿ ಗುಣಪಡಿಸುವುದು ಅಸಾಧ್ಯ. ದೇಹದಲ್ಲಿ ವೈರಾಣುಗಳು ಹರಡುವ ಆರಂಭದ ಹಂತದಲೇ ಚಿಕಿತ್ಸೆ ಪಡೆದುಕೊಳ್ಳುವುದರಿಂದ ಗುಣಮುಖರಾಗಬಹುದು’ ಎಂದರು.

ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಸಭಾಪತಿ ವಿ.ಎಂ.ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿ, ‘ಜಿಲ್ಲೆಯಲ್ಲಿ ಕ್ಯಾನ್ಸರ್ ಪ್ರಕರಣ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ಕ್ಯಾನ್ಸರ್ ಕಾಯಿಲೆ ಕುರಿತು ಡಾ.ಅಣ್ಣಪ್ಪ ಶೆಟ್ಟಿ ಹಾಗೂ ಡಾ.ಅನುರಾಧ ವಿಶೇಷ ಉಪನ್ಯಾಸ ನೀಡಿದರು. ಆರ್ಸಿಎಚ್ ಅಧಿಕಾರಿ ಡಾ.ನಟರಾಜ.ಕೆ, ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಉಪಸಭಾಪತಿ ನಜೀರ ಅಹಮ್ಮದ ಶೇಖ್, ಆಡಳಿತ ಮಂಡಳಿಯ ಸದಸ್ಯ ಸದಾನಂದ ನಾಯ್ಕ, ಕಾರ್ಯದರ್ಶಿ ಜಗದೀಶ ಬಿರ್ಕೋಡಿಕರ, ಆರೋಗ್ಯ ಸಮಿತಿಯ ಮುಖ್ಯಸ್ಥ ಡಾ.ಹೇಮಗಿರಿ ಕೆ., ಖಜಾಂಜಿ ರಾಮಾ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-20-1553710484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.