ಅಜ್ಜಂಪುರ: ‘ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು, ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಹಣ್ಣೆ ಶ್ರೀಶೈಲ ಶಾಖಾ ಮಠದ ಮರುಳಸಿದ್ದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.

ಪಟ್ಟಣದ ತರಳಬಾಳು ಸಮುದಾಯ ಭವನದಲ್ಲಿ ಬುಧವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪಟ್ಟಣದ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಹಾಗೂ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ನಡೆದ 2049ನೇ ಮದ್ಯವರ್ಜನ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

ಎಸ್.ಕೆ. ಆರ್.ಡಿ.ಪಿ ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕಿ ಗೀತಾ ಮಾತನಾಡಿ, ‘ಶಿಬಿರಾರ್ಥಿಗಳು, ಮದ್ಯ ವ್ಯಸನದಿಂದ ಮುಕ್ತಿ ಹೊಂದಿ ನೆಮ್ಮದಿಯ ಜೀವನ ಮಾಡಿ, ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕು ನಡೆಸಿದಾಗ ಮಾತ್ರ ಶಿಬಿರ ಸಾರ್ಥಕವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಮೂರ್ತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಎ.ಸಿ. ಚಂದ್ರಪ್ಪ, ಪ್ರಶಾಂತ್ ಚಿಪ್ರಗುತಿ, ಯೋಜನಾಧಿಕಾರಿ ನಾಗರಾಜ ಕುಲಾಲ್, ಮುಖಂಡ ಹೆಬ್ಬೂರು ನಾಗೇಂದ್ರ, ಶಿಬಿರಾಧಿಕಾರಿ ನಂದಾಕುಮಾರ್, ಆರೋಗ್ಯ ಸಹಾಯಕಿ ನೇತ್ರಾವತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-126-121248300

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.