ಮೂಡುಬಿದಿರೆ: ಕರಾವಳಿ ಹಾಗೂ ಮಲೆನಾಡಿನ ಜೈನ ಸಮುದಾಯದವರ ಸಹಯೋಗದೊಂದಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ ಭಗವಾನ್ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವವನ್ನು ಭಾನುವಾರ ಸಂಜೆ ಆಚರಿಸಲಾಯಿತು.

ಆಳ್ವಾಸ್ ವಿದ್ಯಾರ್ಥಿಗಳಿಂದ ಜಿನಭಜನೆಯೊಂದಿಗೆ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಬಳಿಕ ಕೊಂಬು ವಾದ್ಯ, ನಾದಸ್ವರ ಹಾಗೂ ಪೂರ್ಣಕುಂಭದೊಂದಿಗೆ ಮಹಾವೀರ ಸ್ವಾಮಿಯ ಜಿನಬಿಂಬದ ಮೆರವಣಿಗೆ, ತೋರಣ ಮುಹೂರ್ತ, ದ್ರವ್ಯಾಭಿಷೇಕ, ಅಷ್ಟವಿಧಾರ್ಚನೆ ಪೂಜೆ ಮತ್ತು ಮಹಾಮಂಗಳಾರತಿ ನೆರವೇರಿಸಲಾಯಿತು. ಹೊರನಾಡಿನ ಜಯಶ್ರೀ ಧರಣೇಂದ್ರ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ ಗಾಯನ ನಡೆಯಿತು.

ಕಾರ್ಯಕ್ರಮದ ಅಂಗವಾಗಿ 24 ತೀರ್ಥಂಕರರ ವಿಗ್ರಹಗಳನ್ನು ಅಲಂಕರಿಸಲಾಗಿತ್ತು. ಜಲಾಭಿಷೇಕದಿಂದ ಆರಂಭವಾಗಿ ವಿವಿಧ ಪೂಜಾ ವಿಧಿಗಳು ನಡೆದವು. ಬಳಿಕ ಕನಕ ಪುಷ್ಪವೃಷ್ಟಿಯೊಂದಿಗೆ ವಿಶೇಷ ಅಭಿಷೇಕ ಹಾಗೂ ಶಾಂತಿ ಮಂತ್ರಗಳ ಜೊತೆಗೆ ಮಹಾಮಂಗಳಾರತಿ ನಡೆಯಿತು.

ಕಾಂಗ್ರೆಸ್ ಮುಖಂಡ ಕೆ. ಅಭಯಚಂದ್ರ ಜೈನ್ ಹಾಗೂ ಚೌಟರ ಅರಮನೆಯ ಅನಿತಾ ಸುರೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಡಾ.ಎಂ. ಮೋಹನ ಆಳ್ವ, ಪಟ್ನಶೆಟ್ಟಿ ಸುದೇಶ್ ಕುಮಾರ್, ಚೌಟರ ಅರಮನೆಯ ಕುಲದೀಪ್ ಎಂ., ಆದರ್ಶ್ ಜೈನ್, ಎರ್ಮಾಳ ಬೀಡು ಸೂರಜ್ ಕುಮಾರ್, ಕುತ್ಯಾರು ಅರಮನೆ ಜಿನೇಶ್ ಬಲ್ಲಾಳ್, ರತ್ನಾಕರ್ ಜೈನ್, ಪಡುಬಿದ್ರಿ ಅರಮನೆಯ ಅರಸರು, ಕೂಳೂರಿನ ಆಶಿಕ್ಕುಮಾರ್, ದುಗ್ಗಣ್ಣ ಸಾವಂತರು, ಪಡ್ಯಾರ್ಬೆಟ್ಟದ ಜೀವಂಧರ ಕುಮಾರ್, ಉದ್ಯಮಿ ಶ್ರೀಪತಿ ಭಟ್, ಟ್ರಸ್ಟಿ ವಿವೇಕ್ ಆಳ್ವ, ಅವಿಭಜಿತ ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಅರಸು ಮನೆತನದ ಅರಸರು, ಬೀಡುಮನೆತನದ ಯಜಮಾನರು ಭಾಗವಹಿಸಿದ್ದರು.

ಮುನಿರಾಜ ರೆಂಜಾಳ ಮತ್ತು ನವೀನಚಂದ್ರ ಅಂಬೂರಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-29-1256743531

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.