ಅಣ್ಣಿಗೇರಿ: ಮಹಿಳೆಯರು ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ವ್ಯಕ್ತಿತ್ವ ಅಳವಡಿಸಿಕೊಂಡು ಸುಂದರ ಬದುಕು ಸಾಗಿಸಿ ಎಂದು ಅಣ್ಣಿಗೇರಿ-ನೀಲಗುಂದ ಗುದ್ನೇಶ್ವರ ಮಠದ ಪ್ರಭುಲಿಂಗ ದೇವರು ಹೇಳೀದರು.

ಸ್ಥಳೀಯ ದಿ.ಎಸ್.ಎಂ.ಪಾಟೀಲ ಸಭಾಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಜಯಂತ್ಯುತ್ಸವ ಹಾಗೂ ರಡ್ಡಿ ಜನಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ರಾಜುಗೌಡ ಪಾಟೀಲ, ಪಾಲಕರು ತಮ್ಮ ಮಕ್ಕಳಿಗೆ ಮೊದಲು ಬದುಕಿನ ಮೌಲ್ಯ ಕಲಿಸಬೇಕಿದೆ. ಮೊಬೈಲ್, ಟಿ.ವಿ ಬಿಟ್ಟು ಸಂಸ್ಕಾರಯುತ ಜೀವನದ ಮೌಲ್ಯಗಳ ಬಗ್ಗೆ ತಿಳಿಸುವದು ಅತ್ಯಗತ್ಯ ಎಂದರು.

ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸ್ಥಳೀಯ ದಾಸೋಹ ಮಠದ ಶಿವಕುಮಾರ ಸ್ವಾಮೀಜಿ, ಕಮಲಾಪೂರ ದರ್ಗಾದ ಸಯ್ಯದ್ ಸಜ್ಜಾದ ಹುಸೇನ ಖಾದ್ರಿ ಶಾಜ್ಜಾದ ನಶೀನ, ರಡ್ಡಿ ಜನಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಡಿ.ಅಂದಾನಿಗೌಡ್ರ, ಪ್ರೇಮಾ ಕೋನರಡ್ಡಿ, ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ, ರಿಷಿಕುಮಾರ ಸಾರಂಗಿ, ಲಕ್ಷ್ಮಣ ಬೆಂತೂರ, ಪ್ರದೀಪ ಲೇಂಕನಗೌಡ್ರ, ನಾರಾಯಣ ಮಾಡಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-24-2084534457

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.