ಬಾದಾಮಿ: ‘ಶಿವಶರಣೆ ಹೇಮರಡ್ಡಿ ಮಲ್ಲಮ್ಮನ ಆದರ್ಶಗಳು ಮನುಕುಲಕ್ಕೆ ಸಾರ್ವಕಾಲಿಕ ಸತ್ಯವಾಗಿವೆ. ಪ್ರತಿಯೊಬ್ಬರು ಮಲ್ಲಮ್ಮಳ ಆದರ್ಶಗಳನ್ನು ಅರಿತುಕೊಂಡು ನಡೆಯಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಉಪಾಯುಕ್ತ ಜಿ.ಬಿ.ಗೌಡಪ್ಪಗೋಳ ಹೇಳಿದರು.

ಹೇಮ-ವೇಮ ಚಾರಿಟಬಲ್ ಸಂಸ್ಥೆ ಆಶ್ರಯದಲ್ಲಿ ಭಾನುವಾರ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ 604ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡಿದರು.

‘ತಾಳ್ಮೆ, ಸಹನೆ, ಸದಾಚಾರ, ಸಂತೃಪ್ತಿ, ದಾನ ಮತ್ತು ನಿಷ್ಕಲ್ಮಶ ಭಕ್ತಿ ಗುಣಗಳು ಮಲ್ಲಮ್ಮಳ ಬದುಕಿನ ಆಸ್ತಿಯಾಗಿದ್ದವು’ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಮಾಜದ ಎಸ್.ಎಸ್.ಎಲ್.ಸಿ, ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ಶಿಕ್ಷಣ ಇಲಾಖೆಯ ನಿವೃತ್ತ ಡಿಡಿಪಿಐ ಎಚ್.ಜಿ.ಮಿರ್ಜಿ ಮಲ್ಲಮ್ಮಳ ಭಕ್ತಿ ಕುರಿತು ತಿಳಿಸಿದರು.

ಚಾರಿಟಬಲ್ ಸಂಸ್ಥೆಯ ಅಧ್ಯಕ್ಷ ಡಿ.ಎಂ.ಪೈಲ್ ಅಧ್ಯಕ್ಷತೆ ವಹಿಸಿದ್ದರು. ಡಿ.ಪಿ.ಅಮಲಝರಿ, ವಿ.ಎಸ್.ದೇಸಾಯಿ, ಲಕ್ಷ್ಮಿ ಕಟ್ಟಿ, ಪ್ರೇಮಾ ಪಾಟೀಲ ಇದ್ದರು. ಎಸ್.ಎ.ಭರಮಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೂರ್ಣಿಮಾ ಗಂಗಲ ಸ್ವಾಗತಿಸಿದರು. ಪ್ರತಿಭಾ ಚನ್ನಪ್ಪಗೌಡರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-19-1921923235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.