ಬೈಲಹೊಂಗಲ: ‘ಸನಾತನ ಸಂಸ್ಕಾರ ಮತ್ತು ಮೌಲ್ಯಾಧಾರಿತ ಜೀವನಶೈಲಿಯ ಇಂದಿನ ಅಗತ್ಯವಾಗಿದೆ' ಎಂದು ರುದ್ರಾಕ್ಷಿಮಠದ ಪೀಠಾಧಿಪತಿ ಬಸವಲಿಂಗ ಸ್ವಾಮಿಜಿ ಹೇಳಿದರು.

ತಾಲ್ಲೂಕಿನ ದೊಡವಾಡ ಗ್ರಾಮದ ಜಡಿಸಿದ್ದೇಶ್ವರ ಹಿರೇಮಠದಲ್ಲಿ 40 ದಿನಗಳ ಪರ್ಯಂತ ಹಮ್ಮಿಕೊಳ್ಳಲಾಗಿದ್ದ ವೈದಿಕ ಸಂಸ್ಕಾರ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಮೈಸೂರು ಅರಮನೆ ಜಪದ ಕಟ್ಟೆ ಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ‘ವೈದಿಕ ಪರಂಪರೆ ನಮ್ಮ ಭಾರತೀಯ ಸಂಸ್ಕೃತಿಯ ಹೆಗ್ಗುರುತು’ ಎಂದರು.

ಬ್ಯಾಹಟ್ಟಿ ಹಿರೇಮಠದ ಮರುಳ ಸಿದ್ದಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ಜಂಗಮ ವಟುಗಳು ಕೇವಲ ಪಾಠಗಳನ್ನು ಕಲಿಯುವುದಷ್ಟೇ ಅಲ್ಲ, ಆಚಾರ-ವಿಚಾರಗಳಲ್ಲಿ ಶಿಸ್ತು, ಸೇವಾ ಮನೋಭಾವ ಹಾಗೂ ಧಾರ್ಮಿಕ ನಿಷ್ಠೆಯನ್ನು ಬೆಳೆಸಿಕೊಳ್ಳಬೇಕು’ ಎಂದರು.

ಶಿಬಿರದಲ್ಲಿ ಭಾಗವಹಿಸಿದ ಎಲ್ಲ ವಟುಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಮಠದ ಪುರೋಹಿತ ಬಳಗ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ವಿದ್ವಾನ ಗಂಗಾಧರ ಶಾಸ್ತ್ರಿ, ಮಹಾಂತಯ್ಯ ಶಾಸ್ತ್ರಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-21-833152128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.